Cnewstv.in / 13.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶೀಘ್ರವೇ ಆಯ್ದ ವಯೋಮಿತಿಯವರಿಗೆ ಬೂಸ್ಟರ್ ಡೋಸ್
ನವದೆಹಲಿ : ದೇಶಾದ್ಯಂತ ಕೊರೋನಾ ಮಹಾಮಾರಿಯನ್ನು ಹೊಡೆದೋಡಿಸುವ ನಿಟ್ಟಿನಲ್ಲಿ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಈಗಾಗಲೇ ದೇಶದಲ್ಲಿ 110 ಕೋಟಿಗೂ ಅಧಿಕ ವ್ಯಾಕ್ಸಿನೇಷನ್ ಮಾಡಲಾಗಿದೆ.
ವ್ಯಾಕ್ಸಿನೇಷನ್ ಗೆ ಪೂರಕವಾಗಿ ಬೂಸ್ಟರ್ ಡೋಸ್ ಅನ್ನು ಆಯ್ದ ವಯೋಮಿತಿ ಅವರಿಗೆ ನೀಡಲು ಸರಕಾರ ಶಿಫಾರಸು ಮಾಡಲು ಚಿಂತನೆ ನಡೆಸುತ್ತಿದೆ. ಈಗಾಗಲೇ ಅಮೆರಿಕಾ ಸೇರಿದಂತೆ 36 ದೇಶಗಳಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.
ಕರೋನಾ ಲಸಿಕೆಗಳ ಪ್ರಯೋಗ ನಡೆಸುತ್ತಿರುವ ಲ್ಯಾಬ್ ಗಳ ಒಕ್ಕೂಟದ ಇನ್ಸಾಕಾಗ್ ನಾ ಅಧ್ಯಕ್ಷರಾದ ಡಾ.ಎಸ್.ಕೆ. ಅರೋರಾ ಈ ಬಗ್ಗೆ ಸಲಹೆ ನೀಡಿದ್ದಾರೆ. ವ್ಯಕ್ತಿಗಳ ವೈದ್ಯಕೀಯ ಪರೀಕ್ಷೆ ಆಧರಿಸಿ ಈ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ.
ಇದನ್ನು ಒದಿ : https://cnewstv.in/?p=6795
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv