Breaking News

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

Cnewstv.in / 13.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು. ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ಸೇವಕರಾಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಹಾಗೂ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ.

ಇದನ್ನು ಒದಿ : https://cnewstv.in/?p=6797

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*