Cnewstv.in / 13.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರಾಷ್ಟ್ರ ರಾಜಧಾನಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ : ನಿಯಂತ್ರಿಸಲು ಎರಡು ದಿನಗಳ ಲಾಕ್‌ಡೌನ್ ಘೋಷಿಸಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸಲಹೆ.
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಕಾರಣ ಜನರು ಮನೆಯಿಂದ ಹೊರ ಹೋಗುವುದನ್ನು ತಪ್ಪಿಸುವಂತೆ ಕೇಂದ್ರ ಮಾಲಿನ್ಯ ನಿಗಾ ಸಂಸ್ಥೆ ಶುಕ್ರವಾರ ಸಲಹೆ ನೀಡಿದೆ ಮತ್ತು ವಾಹನ ಬಳಕೆಯನ್ನು ಕನಿಷ್ಠ ಶೇಕಡಾ 30 ರಷ್ಟು ಕಡಿಮೆಗೊಳಿಸುವಂತೆ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ನಿರ್ದೇಶನ ನೀಡಿದೆ.
ದೆಹಲಿಯಲ್ಲಿ ಕಳೆದ 24-ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ(AQI) 471 ದಾಖಲಾಗಿದೆ. ಇದು ಈ ಋತುವಿನಲ್ಲಿ ಅತ್ಯಂತ ಕೆಟ್ಟ ವಾಯು ಆಗಿದೆ. ಗುರುವಾರ 411 ರಷ್ಟು ದಾಖಲಾಗಿತ್ತು. ಫರಿದಾಬಾದ್ (460), ಗಾಜಿಯಾಬಾದ್ (486), ಗ್ರೇಟರ್ ನೋಯ್ಡಾ (478), ಗುರುಗ್ರಾಮ್ (448) ಮತ್ತು ನೋಯ್ಡಾ(488)ದಲ್ಲಿ ಸಂಜೆ 4 ಗಂಟೆಗೆ ತೀವ್ರ ವಾಯು ಗುಣಮಟ್ಟವನ್ನು ದಾಖಲಿಸಿದೆ.
ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಮತ್ತು ಇತರ ಸಂಸ್ಥೆಗಳು ವಾಹನದ ಬಳಕೆಯನ್ನು ಕನಿಷ್ಠ ಶೇಕಡಾ 30 ರಷ್ಟು ಕಡಿಮೆ ಮಾಡಲು ಸಲಹೆ ನೀಡಲಾಗಿದೆ. ಜನರು ಮನೆಯಿಂದ ಕೆಲಸ ಮಾಡುವ ಮೂಲಕ, ಕಾರ್-ಪೂಲಿಂಗ್ ಇತ್ಯಾದಿಗಳ ಮೂಲಕ ಹೊರಾಂಗಣ ಚಟುವಟಿಕೆಗಳನ್ನು ಮಿತಿಗೊಳಿಸಬೇಕು ಸಿಪಿಸಿಬಿ ಸಲಹೆ ನೀಡಿದೆ.
ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದ್ದು, ಈ ಬೆಳವಣಿಗೆಯನ್ನು ತುರ್ತುಪರಿಸ್ಥಿತಿ ಎಂದು ಹೇಳಿರುವ ಸುಪ್ರೀಂಕೋರ್ಟ್ ವಾಯುಮಾಲಿನ್ಯ ತಡೆಗಟ್ಟಲು ತುರ್ತು ಕ್ರಮಗಳ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಇಂದು ತಿಳಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿನ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್’ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಇಂದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ವಾಯುಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿಸಿದ ನ್ಯಾಯಾಲಯವು, ವಾಹನಗಳು, ಪಟಾಕಿಗಳು, ಕೈಗಾರಿಕೆಗಳು ಹಾಗೂ ಧೂಳಿನಿಂದ ಉಂಟಾಗುವ ಮಾಲಿನ್ಯವನ್ನು ನಿಯಂತ್ರಿಸಲು ಎರಡು ದಿನಗಳ ಲಾಕ್‌ಡೌನ್ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿತು.
ಇದನ್ನು ಒದಿ : https://cnewstv.in/?p=6799
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments