Cnewstv.in / 15.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಸಂಗೀತ ನಿರ್ದೇಶಕ ನಾದಬ್ರಹ್ಮ ಎಂದೇ ಖ್ಯಾತರಾಗಿರುವ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಹೇಳಿದ ಮಾತಿಗೆ ಕ್ಷಮೆಯಾಚಿಸಿದ್ದಾರೆ.
ಹಂಸಲೇಖರವರು ಪೇಜಾವರ ಶ್ರೀಗಳ ಕುರಿತು ಹೇಳಿದ ಮಾತು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಹಂಸಲೇಖ ಅವರು ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ಎಲ್ಲ ಮಾತುಗಳು ಎಲ್ಲಾ ಮಾತುಗಳು ವೇದಿಕೆಯಲ್ಲ, ತಪ್ಪು. ಅ ವೇದಿಕೆಯಲ್ಲಿ ನುಡಿದರೆ ಮುತ್ತಿನ ಹಾರದಂತಿರಬೇಕು ಆದರೆ ತಪ್ಪಾಗಿದೆ. ಅಸ್ಪೃಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಅ ಅನಿಷ್ಠವನ್ನು ತೊಡೆದುಹಾಕುವುದಕ್ಕೆ ಪೇಜಾವರರು ಹಾಗೂ ಅನೇಕ ಗುರುಗಳು ಪ್ರಯತ್ನ ನಡೆಸುತ್ತಿದ್ದಾರೆ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ.
ನಾನು ಒಬ್ಬ ಸಂಗೀತಗಾರ, ನನಗ್ಯಾಕೆ ಟ್ರೋಲ್ಗಳು, ನನಗೆ ಯಾರಿಗೆ ನೋವುಂಟುಮಾಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಅದರ ಎಲ್ಲಾ ಅನಿಷ್ಟಗಳನ್ನು ತೆಗೆದುಹಾಕುವ ದಿಸೆಯಲ್ಲಿ ನನ್ನ ಪಾತ್ರ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡುತ್ತೇನೆ ಎಂದು ಕ್ಷೇಮೆ ಕೇಳಿದ್ದಾರೆ.
ಮೇಲುಜಾತಿ ಹಾಗೂ ಕೀಳುಜಾತಿ, ಜಾತಿತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಅಂಬೇಡ್ಕರ್ ವಿಚಾರವನ್ನು ಕೂಡ ಉಲ್ಲೇಖಿಸಿದ್ದರು. ಇಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದೆ. ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ವಿಡಿಯೋ ಮುಖಾಂತರ ಕ್ಷಮೆ ಕೇಳಿದ್ದಾರೆ.
ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ..’ ಎಂದು ಹೇಳಿದ್ದರು.
ಇದನ್ನು ಒದಿ : https://cnewstv.in/?p=6804
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv