Cnewstv.in / 17.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಅತಿಥಿ ಶಿಕ್ಷಕ ನೇಮಕಾತಿ ಆದೇಶ
ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=6817
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv