Breaking News

ನಟಿ ಭಾವನಾ ರಾಮಣ್ಣ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆ.

Cnewstv.in / 17.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು: ಕನ್ನಡದ ಖ್ಯಾತ ನಟಿ ಭಾವನಾ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.‌ ಭಾವನಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರನ್ನು ಭೇಟಿಯಾಗಿ ಮತ್ತೆ ಕಾಂಗ್ರೆಸ್ ಗೆ ಸೇರಿಕೊಂಡಿದ್ದಾರೆ. ರಂದೀಪ್‌ ಸುರ್ಜೇವಾಲ ಶುಭಾಶಯ ತಿಳಿಸಿದ್ದಾರೆ.

ಕಾಂಗ್ರೆಸ್ ನಲ್ಲಿಯೇ ಇದ್ದ ಭಾವನಾ 2018ರ ಮೇ 10ರಂದು ಬಿಜೆಪಿ ಸೇರಿದ್ದರು. ಖಕಳೆದ ವಿಧಾನಸಭಾ ಚುನಾವಣೆ ವೇಳೆ ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ನಿರಾಕರಿಸಿತ್ತು. ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಸಭೆಯಿಂದ ಹೊರ ನಡೆದಿದ್ದರು.

ಅದಾದ ಮೇಲೆ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದಿರು. ಬಿಜೆಪಿ ಪರ ಹಲವು ಚುನಾವಣಾ ಕ್ಯಾಂಪೇನ್ ನಲ್ಲಿ ಕಾಣಿಸಿಕೊಂಡು ಮತಯಾಚನೆ ಮಾಡಿದ್ದರು. ಅದರೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

“ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆಯಾಗಿದ್ದ, ಕನ್ನಡದ ನಟಿ ಭಾವನಾ ರಾಮಣ್ಣ ನನ್ನನ್ನು ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಸೇರಿಕೊಂಡು, ಪಕ್ಷಕ್ಕಾಗಿ ದುಡಿಯುವ ಸಂಕಲ್ಪ ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ, ಅವರಿಗೆ ಶುಭಾಶಯಗಳು” ಎಂದು ಟ್ವೀಟ್‌ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=6822

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*