Breaking News

ಹಾಸನ : ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ

Cnewstv.in / 18.11.2021/ ಹಾಸನ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಹಾಸನ : ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ

ಹಾಸನ: ಹಾಸನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಸ್ಪರ್ಧಿಸಲಿದ್ದಾರೆ..

ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ಅಥವ ರೇವಣ್ಣ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅಂತೆಯೇ ಅನೇಕರು ಸೂರಜ್ ರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡರು ಅಭ್ಯರ್ಥಿ ಆಯ್ಕೆ ಬಗ್ಗೆ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಸಿದ್ದರು. ಸಭೆಯಲ್ಲಿ ಕೆಲವು ಶಾಸಕರು ಸಹ ಡಾ. ಸೂರಜ್ ರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಒತ್ತಾಯ ಮಾಡಿದ್ದರು. ಎಲ್ಲಾರ ಅಭಿಪ್ರಾಯದಂತೆ
ಅಂತಿಮವಾಗಿ ಪಕ್ಷ ಸೂರಜ್ ರೇವಣ್ಣ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.

2020ರಲ್ಲಿ ಹಾಸನ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಡಾ. ಸೂರಜ್ ರೇವಣ್ಣ ವಿಧಾನಸಭ ಚುನಾವಣೆಗೆ ಸ್ಪರ್ಧೆ ಮಾಡುವ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಶುಕ್ರವಾರ ಅವರು ನಾಮಪತ್ರ ಸಲ್ಲಿಸುತ್ತಾರೆ ಎನ್ನಲಾಗುತ್ತಿದೆ.

ಇದನ್ನು ಒದಿ : https://cnewstv.in/?p=6840

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*