Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಸೊರಬ ಹಾಗೂ ಹೊಸನಗರ ತಾಲ್ಲೂಕು ಹಾಗೂ ನಗರ ವ್ಯಾಪ್ತಿಯಲ್ಲಿ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಶಸ್ತ್ರ/ಆಯುಧಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಲು ಈ ಮೂಲಕ ಸೂಚಿಸಲಾಗಿದೆ.
ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ ಠೇವಣಿ ಮಾಡಿದ ಶಸ್ತ್ರ/ಆಯುಧ ಪರವಾನಿಗೆದಾರರಿಗೆ ಸೂಕ್ತ ರಶೀದಿಯನ್ನು ತಪ್ಪದೇ ನೀಡುವುದು. ಈ ಶಸ್ತ್ರ/ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ನಂತರ ಅಂದರೆ ಚುನಾವಣೆಯ ಫಲಿತಾಂಶವನ್ನು ಘೋಷಿಸಿದ ನಂತರ ಡಿಪಾಸಿಟ್ ಮಾಡಿದ ಪರವಾನಿಗೆದಾರರಿಗೆ ಹಿಂದಿರುಗಿಸುವುದು. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾ ಆಡಳಿತವು ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.
ಸರ್ಕಾರಿ ಕರ್ತವ್ಯದಲ್ಲಿ ನಿರತರಾದ ರಕ್ಷಣಾ ಸಿಬ್ಬಂದಿಗಳಿಗೆ ಎಂ.ಪಿ.ಎಂ/ವಿ.ಐ.ಎಸ್.ಎಲ್ ಮತ್ತು ರಾಷ್ಟ್ರಿಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ಅಧಿಕೃತ ಪರವಾನಿಗೆಯಲ್ಲಿ ಹೊಂದಿರುವ ಆಯುಧಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=6842
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments