Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಲಕ್ಕಿನಕೊಪ್ಪ ಬಳಿ ಭೀಕರ ಅಪಘಾತ, ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ.
ಶಿವಮೊಗ್ಗ : ಶಿವಮೊಗ್ಗದ ಹೊರಹೊಲಯ ಲಕ್ಕಿನಕೊಪ್ಪ ಬಳಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪ ಗ್ರಾಮದ ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಅಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಗಾಯಾಳುಗಳ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಇದನ್ನು ಒದಿ : https://cnewstv.in/?p=6844
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv