Breaking News

ಸಫಾಯಿ ಕರ್ಮಚಾರಿ ನಿಗಮ : ಅರ್ಜಿ ಅವಧಿ ವಿಸ್ತರಣೆ.

Cnewstv.in / 18.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಸಫಾಯಿ ಕರ್ಮಚಾರಿ ನಿಗಮ : ಅರ್ಜಿ ಅವಧಿ ವಿಸ್ತರಣೆ.

ಶಿವಮೊಗ್ಗ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ವತಿಯಿಂದ 2021-22 ನೇ ಸಾಲಿನ ಸಫಾಯಿ ಕರ್ಮಚಾರಿ/ಪೌರ ಕಾರ್ಮಿಕರು ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳಿಗೆ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರ ಖರೀದಿ ಮತ್ತು ಮಕ್ಕಳಿಗೆ ಆನ್‍ಲೈನ್ ಪಾಠ ಕೇಳಲು ಟ್ಯಾಬ್ ವಿತರಣೆ ಹಾಗೂ ದ್ವಿಚಕ್ರ ವಾಹನ ಯೋಜನೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಅವಧಿಯನ್ನು ನವೆಂಬರ್ 15 ರವರೆಗೆ ನಿಗದಿಪಡಿಸಲಾಗಿತ್ತು. ಆಸಕ್ತ ಅರ್ಹ ಫಲಾಪೇಕ್ಷಿಗಳು ನಿಗಮದ ವೆಬ್‍ಸೈಟ್ www.ksskdc.kar.nic.in ನಲ್ಲಿ ಅರ್ಜಿ ಡೌನ್‍ಲೋಡ್ ಮಾಡಿಕೊಂಡು ಹಾಗೂ ಆಫ್‍ಲೈನ್ ಮೂಲಕ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ಗಾಂಧಿನಗರ, ಶಿವಮೊಗ್ಗ ಇಲ್ಲಿ ಅರ್ಜಿ ಪಡೆದು ದಾಖಲೆಗಳೊಂದಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08182-224349 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಇದನ್ನು ಒದಿ : https://cnewstv.in/?p=6846

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*