Breaking News

ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ : ಕಿಮ್ಮನೆ ರತ್ನಾಕರ್ ವಾಗ್ದಾಳಿ.

Cnewstv.in / 22.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ : ಕಿಮ್ಮನೆ ರತ್ನಾಕರ್ ವಾಗ್ದಾಳಿ.

ಶಿವಮೊಗ್ಗ: ಆರಗ ಜ್ಞಾನೇಂದ್ರ ಅವರು ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಾಗಿಲ್ಲ. ಬದಲಾಗಿ ತೀರ್ಥಹಳ್ಳಿಗೆ ಮಾತ್ರ ಗೃಹಸಚಿವರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಸಚಿವರಾದಾಗ ನಾನೂ ಶುಭ ಹಾರೈಸಿದ್ದೆ. ಆದರೆ ಇದೀಗ ಅವರು ನಡೆದುಕೊಳ್ಳುವ ರೀತಿ ನೋಡಿದರೆ ತೀರ್ಥಹಳ್ಳಿ ಮರ್ಯಾದೆ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ತೀರ್ಥಹಳ್ಳಿಯ ಪೊಲೀಸ್ ಠಾಣೆಗಳು ಹಾಗೂ ಆರ್ ಎಫ್ ಕಚೇರಿಗೆ ಮಾತ್ರ ಆರಗ ಸೀಮಿತರಾಗಿದ್ದಾರೆ ಎಂದರು.

ಬಿಜೆಪಿಯವರೇ ಅಕ್ರಮವಾಗಿ ಮರಳು ಹೊಡೆಯುತ್ತಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರೇ ಗೃಹಸಚಿವರು, ಪೊಲೀಸರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುವ ಕೆಲಸವನ್ನು ಆರಗ ಜ್ಞಾನೇಂದ್ರ‌ ಹಾಗೂ ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ‌ ಎಂದು ಕಿಮ್ಮನೆ ರತ್ನಾಕರ್ ಕಿಡಿಕಾರಿದರು.

ಇದನ್ನು ಒದಿ : https://cnewstv.in/?p=6851

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*