Cnewstv.in / 23.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿಕ್ಷಣದಷ್ಟೇ ಪ್ರಾಮುಖ್ಯತೆಯನ್ನು ಆರೋಗ್ಯಕ್ಕೂ ನೀಡಬೇಕು. ಆರೋಗ್ಯವಂತರಾಗಿದ್ದರೆ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಆರೋಗ್ಯದೆಡೆ ಹೆಚ್ಚಿನ ಗಮನ ಹರಿಸಬೇಕು. ಹಾಗೂ ಎಲ್ಲ ಮಕ್ಕಳು ಜಂತುಹುಳು ನಾಶಕ ಮಾತ್ರೆಗಳನ್ನು ತೆಗೆದುಕೊಳ್ಳಬೇಕೆಂದು ಜಿ.ಪಂ. ಸಿಇಓ ಎಂ.ಎಲ್.ವೈಶಾಲಿ ಕರೆ ನೀಡಿದರು.
ಇಂದು ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನಲ್ಲಿ ಏಕಾಗ್ರತೆ ಸಾಧಿಸಲು ಉತ್ತಮ ಆರೋಗ್ಯ ಹೊಂದಿರಬೇಕು. ಆದ ಕಾರಣ ಪ್ರತಿ ಮಕ್ಕಳು ಶಾಲೆ, ಅಂಗನವಾಡಿಗಳಲ್ಲಿ ನೀಡಲಾಗುವ ಜಂತುಹುಳು ನಾಶಕ ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ಹಾಗೂ ತಮ್ಮ ಕುಟುಂಬ, ನೆರೆಹೊರೆಯವರು ಈ ಮಾತ್ರೆ ಸೇವನೆ ಮಾಡುವಂತೆ ತಿಳಿಸಬೇಕು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನವೆಂಬರ್ 23 ರಿಂದ 27 ರವರೆಗೆ 1 ರಿಂದ 19 ವರ್ಷದ ಮಕ್ಕಳಿಗೆ ಆಲ್ಬೆಂಡಜೋಲ್ ಜಂತುಹುಳು ನಾಶಕ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು ಎಲ್ಲ ಮಕ್ಕಳೂ ಇದರ ಸದುಪಯೋಗ ಪಡೆಯಬೇಕೆಂದರು.
ಜಂತಹುಳು ನಾಶಕ ಮಾತ್ರೆಗಳನ್ನು ಉಚಿತವಾಗಿ ಶಾಲೆಗಳಲ್ಲಿ, ಅಂಗನವಾಡಿಗಳಲ್ಲಿ, ಪದವಿಪೂರ್ವ ಕಾಲೇಜು, ಐಟಿಐ ಕಾಲೇಜ್, ಟೆಕ್ನಿಕಲ್ ಕೋರ್ಸ್ ಕಾಲೇಜು, ನರ್ಸಿಂಗ್ ಕಾಲೇಜ್, ಪ್ರಥಮ ಬಿ.ಎ, ಮೆಡಿಕಲ್ ಮತ್ತು ಆಯುರ್ವೇದಿಕ್ ಕಾಲೇಜುಗಳಲ್ಲಿ ವಿತರಿಸಲಾಗುತ್ತಿದೆ. 1 ರಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧಮಾತ್ರೆ ಹಾಗೂ 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 1 ಮಾತ್ರೆ ನೀಡಲಾಗುವುದು. 2021-22 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 4,29,195 ಮಕ್ಕಳು ನೋಂದಣಿಯಾಗಿದ್ದು ಜಿಲ್ಲೆಯ ಎಲ್ಲ ಮಕ್ಕಳ ಪೋಷಕರು ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದರು.
ಇದನ್ನು ಒದಿ : https://cnewstv.in/?p=6867
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments