Cnewstv.in / 23.11.2021/ ಭೋಪಾಲ್ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಾಲೆ ಬಸ್ ತಪ್ಪಿತೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಭೋಪಾಲ್: ಶಾಲೆಗೆ ತೆರಳಬೇಕಿದ್ದ ಬಸ್ ತಪ್ಪಿತೆಂದು ಮನನೊಂದ ವಿದ್ಯಾರ್ಥಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂದಿಸಿದಂತೆ ಆಮ್ಧೋಹ್ ಗ್ರಾಮದ ಘೋಡಾಡೋಂಗ್ರಿ ಪೋಲಿಸ್ ಪೋಸ್ಟ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪೋಷಕರು ಪೊಲೀಸರಿಗೆ ನೀಡಿರುವ ಮಾಹಿತಿಯ ಪ್ರಕಾರ ಬಾಲಕ ಶಾಲೆಗಳಲ್ಲಿ ತಪ್ಪದೇ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗುತ್ತಿದ್ದ ಹಾಗೂ ವಿದ್ಯಾಭ್ಯಾಸದಲ್ಲಿ ಮುಂದಿದ್ದ. ಶಾಲೆಗೆ ಹೋಗುವ ಬಸ್ ತಪ್ಪಿದ್ದಕ್ಕಾಗಿ ಬಾಲಕ ತೀವ್ರವಾಗಿ ಮನನೊಂದು ಕಣ್ಣೀರು ಹಾಕುತ್ತಾ ಮನೆಗೆ ಬಂದಿದ್ದಾನೆ. ಈ ಬಳಿಕ ಮನೆಯ ಹಿಂಭಾಗದಲ್ಲಿದ್ದ ಮರವೊಂದಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ” ಎಂದು ಪೋಷಕರು ಹೇಳಿದ್ದಾರೆ.
ಇದನ್ನು ಒದಿ : https://cnewstv.in/?p=6870
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv