Cnewstv.in / 24.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕನನ್ನು ಬಂಧಿಸಿದ ದೆಹಲಿ ಪೋಲಿಸರು.
ನವದೆಹಲಿ: ದೆಹಲಿಯ ದ್ವಾರಕಾದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಬಳಿಕ ಹತ್ಯೆ ಮಾಡಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನವೆಂಬರ್ 15 ರಂದು ದೆಹಲಿ ಪೊಲೀಸರಿಗೆ ಕಸದ ಬಳಿಯ ಚರಂಡಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಂತರ ತನಿಖೆ ನಡೆಸಿದ ಪೊಲೀಸರು ನವೆಂಬರ್ 17 ರಂದು ಕೊಲೆ ಆರೋಪದ ಮೇಲೆ ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆಯ ವೇಳೆ ಆರೋಪಿಯು ಅತ್ಯಾಚಾರವೆಸಗಿ, ಕೊಲೆ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.
ಮಹಿಳೆ ಮೇಲೆ ಅತ್ಯಾಚಾರ ಎಸಗಿದ ನಂತರ ಆರೋಪಿ ಸಿಕ್ಕಿಬೀಳುವ ಭಯದಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಖಾಸಗಿ ಭಾಗಗಳಿಗೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=6875
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv