Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನಗರದ ಎರಡು ಕಡೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ.
ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಿವಮೊಗ್ಗದ ಎರಡು ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರುದ್ರೇಶಪ್ಪ ಎಂಬುವರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಗದಗ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರುದ್ರೇಶಪ್ಪ ನವರಿಗೆ ಸೇರಿದ ಚನ್ನಗಿರಿ ತೋಟ, ಮನೆ ಹಾಗೂ ಗದಗದ ಬಾಡಿಗೆ ಮನೆ ಮೇಲೆ ಸಹ ಐಟಿ ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಶಿವಮೊಗ್ಗದ ಚಾಲುಕ್ಯ ನಗರದ ಮನೆ ಹಾಗೂ ಗೋಪಾಳ ಗೌಡ ಬಡಾವಣೆಯಲ್ಲಿರುವ ಮನೆಯ ಮೇಲೂ ಸಹ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನು ಒದಿ : https://cnewstv.in/?p=6878
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv