Cnewstv.in / 24.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಎಸಿಬಿ ದಾಳಿಯಲ್ಲಿ ಅಧಿಕಾರಿಯ ಮನೆಯಲ್ಲಿ ಸಿಕ್ತು 7 ಕೆ.ಜಿ ಗೂ ಅಧಿಕ ಬಂಗಾರ.
ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಿವಮೊಗ್ಗದ ಎರಡು ಮನೆಯ ಮೇಲೆ ದಾಳಿ ನಡೆಸಿದರು.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಎಂಬವರ ಮನೆಯ ಮೇಲೆ ದಾಳಿ ನಡೆಸಿದ್ದರು.
ಶಿವಮೊಗ್ಗದ ಚಾಲುಕ್ಯ ನಗರದ ಮನೆ ಹಾಗೂ ಗೋಪಾಳ ಗೌಡ ಬಡಾವಣೆಯಲ್ಲಿರುವ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ರುದ್ರೇಶಪ್ಪ ನವರ ಶಿವಮೊಗ್ಗದ ಮನೆಯಲ್ಲಿ 7 ಕೆಜಿಗೂ ಅಧಿಕ ಚಿನ್ನಾಭರಣಗಳು ಪತ್ತೆಯಾಗಿದೆ. 3 ಕೆಜಿ ಬೆಳ್ಳಿ, ವಜ್ರದ ಹಾರಗಳು ಸೇರಿದಂತೆ ಒಟ್ಟು 15 ಲಕ್ಷ ರೂಪಾಯಿ ನಗದು ಎರಡು ವಾಹನಗಳನ್ನು ದೊರೆತಿದೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮನೆಯಲ್ಲಿರುವ ಮರಗಳನ್ನು ಅಳತೆ ಮಾಡುತ್ತಿದ್ದಾರೆ.
ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿತು. ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನು ಒದಿ : https://cnewstv.in/?p=6882
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv