Cnewstv.in / 25.11.2021/ ಶಿಲ್ಲಾಂಗ್/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಾಜಿ ಸಿಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ!
ಶಿಲ್ಲಾಂಗ್ : ಕಾಂಗ್ರೆಸ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಾಂಗ್ರೆಸ್ ನಾ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು 11 ಮಂದಿ ಶಾಸಕರು ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಈ ಬೆಳವಣಿಗೆಯಿಂದಾಗಿ 17 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ತೃಣಮೂಲಕ್ಕೆ ಸೇರ್ಪಡೆಯಾಗಿದ್ದಾರೆ.
ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ವಿನ್ಸೆಂಟ್ ಹೆಚ್ ಪಾಲಾ ಅವರು ಮೇಘಾಲಯ ಘಟಕದ ಹೊಸ ಮುಖ್ಯಸ್ಥರಾಗಿ ನೇಮಕಗೊಂಡಾಗಿನಿಂದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಕುಲ್ ಎಂ ಸಂಗ್ಮಾ ನಡುವೆ ಬಿರುಕು ಮೂಡಿತ್ತು.
ರಾಹುಲ್ ಗಾಂಧಿ ಅವರು ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿನ್ಸೆಂಟ್ ಎಚ್ ಪಾಲಾ ಅವರನ್ನು ತಮ್ಮ ಬೇಡಿಕೆಗಳ ಕುರಿತು ಭೇಟಿಯಾದ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ.
ಟಿಎಂಸಿ ಪರವಾಗಿ ಪ್ರಶಾಂತ್ ಕಿಶೋರ್ ಅವರ ತಂಡದ ಸದಸ್ಯರು ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಒದಿ : https://cnewstv.in/?p=6890
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv