Breaking News

ನಾನು ಕೂಡ ಎಂ.ಪಿ ನೀವೂ ಕೂಡ ಎಂಪಿ : ಸಂಸದ ಬಿ. ವೈ. ರಾಘವೇಂದ್ರ

Cnewstv.in / 25.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನಾನು ಕೂಡ ಎಂ.ಪಿ ನೀವೂ ಕೂಡ ಎಂಪಿ : ಸಂಸದ ಬಿ. ವೈ. ರಾಘವೇಂದ್ರ

ಶಿಕಾರಿಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಭಿನ್ನ ಶೈಲಿಯಲ್ಲಿ ಜನರಿಗೆ ಅಭಿವೃದ್ಧಿ ಕಾರ್ಯಕ್ರಮವನ್ನು ಮಾಡಿದೆ. ರಾಜ್ಯದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಅನೇಕ ಜನಪರ ಕೆಲಸವನ್ನು ಮಾಡಿದ್ದಾರೆ. ಅಭಿರುದ್ಧಿಗಾಗಿ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅರುಣ್ ಅವರನ್ನು ಭಾರಿ ಅಂತರದಲ್ಲಿ ಗೆಲ್ಲಿಸೋಣ, ನಾನು ಕೂಡ ಮೆಂಬರ್ ಆಫ್ ಪಾರ್ಲಿಮೆಂಟ್ ನೀವೂ ಮೆಂಬರ್ ಆಫ್ ಪಂಚಾಯತ್ (ಎಂ.ಪಿ )ಆಗಿದ್ದೀರ ಎಲ್ಲರು ಒಟ್ಟಿಗೆ ಸೇರಿ ಪಕ್ಷವನ್ನು ಭಲ ಪಡಿಸೋಣ ಎಂದು ಸಂಸದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.

ಶಿಕಾರಿಪುರದ ಕುಮುದ್ವತಿ ಕಾಲೇಜಿನಲ್ಲಿ ಶಿಕಾರಿಪುರ ಮಂಡಲದಲ್ಲಿ ವಿಧಾನ ಪರಿಷತ್ ಚುನಾವಣೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರಚಾರ ಸಭೆನ್ನು ಉದ್ಘಾಟಿಸಿ ಮಾತನಾಡಿ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಶಿವಮೊಗ್ಗ ಕ್ಷೇತ್ರದಿಂದ ಅಭ್ಯರ್ಥಿಯಾದ ಡಿ.ಎಸ್ ಅರುಣ್ ಅವರ ಪರ ಮತಯಾಚಿಸಿದರು.

ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು. ಶಾಸಕರಾದ ಅಶೋಕ್ ನಾಯ್ಕ್, ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಮೇಘರಾಜ್. ತಾಲೂಕು ಅಧ್ಯಕ್ಷರಾದ ವೀರೇಂದ್ರ ಪಾಟೀಲ್. ಎಂ. ಎ. ಡಿ. ಬಿ ಅಧ್ಯಕ್ಷರಾದ ಗುರುಮೂರ್ತಿ ಮತ್ತು ಪಕ್ಷದ ಪ್ರಮುಖ ಮುಖಂಡರು ಮತ್ತಿತರು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=6897

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*