Breaking News

26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ.

Cnewstv.in / 26.11.2021/ ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ.

ಮುಂಬೈ : 2008 ರ ಮುಂಬೈ ಭಯೋತ್ಪಾದಕ ದಾಳಿಯಾಗಿ 13 ವರ್ಷಗಳು ಕಳೆದಿದೆ.

ಇಡೀ ದೇಶವೇ ಎಂದು ಮರೆಯಲಾಗದ ದಿನ 2008 ರ ನವೆಂಬರ್ 26. ಭಾರತದಲ್ಲಿ ಕರಾಳ ಅಧ್ಯಾಯ ಬರೆದ ದಿನ. ಅದೇಷ್ಟೇ ಜನ ಅಮಾಯಕ ಜನರನ್ನು, ವೀರ ಯೋಧರನ್ನು ಕಳೆದುಕೊಂಡ ಕರಾಳ ದಿನ. ಈ ದಿನವನ್ನು ದೇಶದ ಜನ ಎಂದೂ ಮರೆಯುವುದಿಲ್ಲ.

ಪಾಕಿಸ್ತಾನದ ಕರಾಚಿಯಿಂದ ಕಗ್ಗತ್ತಲಲ್ಲಿ ಸಮುದ್ರ ಮಾರ್ಗದ ಮೂಲಕ ಮುಂಬೈ ನಗರಕ್ಕೆ ಬಂದಿದ್ದ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ 10 ಭಯೋತ್ಪಾದಕರು ರಕ್ತದ ಹೊಳೆಯೇ ಹರಿಸಿದ್ದರು. 2008ರ ನ.26ರಂದು ಮುಂಬೈನ ತಾಜ್ ಹೋಟೆಲ್ ನಲ್ಲಿದ್ದ ಜನರನ್ನು 3 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಉಗ್ರರು ಅಟ್ಟಹಾಸ ಮೆರೆದಿದ್ದರು.

ಛತ್ರಪತಿ ಶಿವಾಜಿ ಟರ್ಮಿನಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ಅಮಾಯಕ‌ ನಾಗರೀಕರು ಸಾವನ್ನಪ್ಪಿದ್ದರು. ಭಾರತದ ಇತಿಹಾಸದಲ್ಲಿಯೇ ಎಂದೂ ಕಂಡಿರದಂತಹ ರೀತಿಯಲ್ಲಿ ದಾಳಿ ನಡೆಸಿದ್ದರು.

ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ 10 ಭಯೋತ್ಪಾದಕರು ಮುಂಬೈ ಮೇಲೆ ದಾಳಿ ನಡೆಸಿದ್ದರು. 68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸಿದ್ದರು. ಉಗ್ರರ ವಿರುದ್ಧ ಹೋರಾಟದಲ್ಲಿ 17 ಜನ ಭಧ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು. ಈ ಕರಾಳ ದಿನಕ್ಕೆ ಇಂದಿಗೆ 13 ವರ್ಷಗಳು ಕಳೆದಿದೆ.‌

ಕರಾಳ ದಿನ ಹಿನ್ನಲೆಯಲ್ಲಿ ಮುಂಬೈ ನಗರದಾದ್ಯಂತ ಭಾರೀ ಕಟ್ಟೆಚ್ಚರವನ್ನು ವಹಿಸಿದ್ದಾರೆ. ಹುತಾತ್ಮರಾದ ಯೋಧರಿಗೆ ಎಲ್ಲೆಡೆ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ಸೇರಿದಂತೆ ಅನೇಕ‌ ನಾಯಕರುಗಳು ಶ್ರದ್ಧಾಂಜಲಿ ಅರ್ಪಿಸಿದರು.

ಇದನ್ನು ಒದಿ : https://cnewstv.in/?p=6917

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*