Breaking News

ಕೃಷಿ ಕಾಯ್ದೆ ಹಿಂಪಡೆಯುವ ಆದೇಶ ಸಂಸತ್ತಿನಲ್ಲಿ ಅಂಗೀಕಾರವಾಗಲಿ : ಸಂಯುಕ್ತ ಕಿಸಾನ್ ಮೋರ್ಚಾ

Cnewstv.in / 26.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಕೃಷಿ ಕಾಯ್ದೆ ಹಿಂಪಡೆಯುವ ಆದೇಶ ಸಂಸತ್ತಿನಲ್ಲಿ ಅಂಗೀಕಾರವಾಗಲಿ : ಸಂಯುಕ್ತ ಕಿಸಾನ್ ಮೋರ್ಚಾ

ಶಿವಮೊಗ್ಗ : ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಮಂಡಿಸಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಸಾಮಾಜಿಕ ಹೋರಾಟಗಾರರು ಇಂದು ಅಶೋಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟನೆ ಮಾಡಿದರು.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡರೆ ಸಾಲದು, ವಾಪಸ್ ತೆಗೆದುಕೊಂಡ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಿ ತಕ್ಷಣವೇ ವಾಪಸ್ಸು ಪಡೆಯಬೇಕು. ಬೆಂಬಲ ಬೆಲೆಯನ್ನು ಶಾಸನಬದ್ಧಗೊಳಿಸಬೇಕು. ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ಮಳೆ ಹಾನಿಗೆ ರೈತರು ಒಳಗಾಗಿದ್ದು ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡಬೇಕು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತಸಂಘದ ನಾಯಕರಾದ ಎಚ್.ಆರ್ ಬಸವರಾಜಪ್ಪ, ಕೆ.ಎಲ್ ಅಶೋಕ್, ಮೋಹನ್, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್. ಪಿ. ಗಿರೀಶ್. ರಮೇಶ್ ಹೆಗ್ಗಡೆ, ಕೆ ರಂಗನಾಥ್. ಎಚ್.ಸಿ. ಯೋಗೇಶ್. ರಮೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=6919

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*