Cnewstv.in / 27.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರೂಪಾಂತರಿ ಕೊರೊನಾ ವೈರಸ್ ಬಗ್ಗೆ ಜನತೆ ಎಚ್ಚೆತ್ತುಕೊಳ್ಳಬೇಕು : ಆರೋಗ್ಯ ಸಚಿವ ಡಾ ಕೆ ಸುಧಾಕರ್
ಬೆಂಗಳೂರು: ಕಳೆದೊಂದು ವಾರದಿಂದ ರೂಪಾಂತರಿ ಕೊರೊನಾ ವೈರಸ್ B.1.1.529 ಒಮೈಕ್ರಾನ್(Omicron) ಕಾಣಿಸಿಕೊಂಡಿದೆ. ಒಮೈಕ್ರಾನ್ ವೈರಸ್ ಸಮುದಾಯಕ್ಕೆ ಬಂದಾಗ ವೇಗವಾಗಿ ಹರಡಬಹುದು ಎಂಬ ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ. ಈ ಬಗ್ಗೆ ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕುಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ಆಫ್ರಿಕನ್ ದೇಶಗಳಲ್ಲಿ ಕಂಡುಬಂದಿರುವ ಹೊಸ ತಳಿಯಿಂದ ಸದ್ಯಕ್ಕೆ ನಮ್ಮ ರಾಜ್ಯಕ್ಕೆ ಯಾವುದೇ ಆತಂಕ ಇಲ್ಲ. ರೂಪಾಂತರ ತಳಿಯ ಬಗ್ಗೆ ರಾಜ್ಯದ ಆರೋಗ್ಯ ಅಧಿಕಾರಿಗಳು ಈಗಾಗಲೇ ಚರ್ಚಿಸಿದ್ದಾರೆ. ಸದ್ಯಕ್ಕೆ ಇರುವ ವರದಿಯ ಪ್ರಕಾರ ಜನರು ಯಾವುದೇ ಆತಂಕಪಡುವ ಅಗ್ಯವಿಲ್ಲ ಅದರೆ ನಿರ್ಲಕ್ಷ್ಯ ಮಾಡಬಾರದು ಎಂದರು.
ಹೊಸ ವೈರಸ್ ಬಗ್ಗೆ ಜನರು ಆತಂಕಪಡದೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ರೂಪಾಂತರಿ ವೈರಸ್ ಇರುವ ದೇಶದಿಂದ ಬರುವ ನಾಗರಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಲಾಗುವುದು. ಕೋವಿಡ್ ಟೆಸ್ಟ್ ಮಾಡಿಸಿದ ನಂತರ ಪಾಲಿಟಿವ್ ಬಂದವರನ್ನು ಪ್ರತ್ಯೇಕವಾಗಿ ಇರಿಸಲಾಗುವುದು. ಏಳು ದಿನಗಳ ನಂತರ ಮತ್ತೆ ಟೆಸ್ಟ್ ಮಾಡಿ ನೆಗೆಟಿವ್ ಇದೆಯೇ ಎಂದು ಖಚಿತಪಡಿಸುತ್ತೇವೆ ಎಂದರು.
ರೂಪಾಂತರಿ ವೈರಸ್ ಬರುತ್ತಿರುವ ಹಿನ್ನೆಲೆ ಜನತೆ ಎಚ್ಚೆತ್ತುಕೊಳ್ಳಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಇನ್ನೂ ರಾಜ್ಯದಲ್ಲಿ 45 ಲಕ್ಷ ಮಂದಿ ಎರಡನೇ ಡೋಸ್ ಹಾಕಿಸಿಕೊಂಡಿಲ್ಲ. ಮೊದಲ ಲಸಿಕೆ ತೆಗೆದುಕೊಂಡು ಅವಧಿ ಮುಗಿದಿದ್ದರೂ ಎರಡನೇ ಲಸಿಕೆ ಪಡೆದಿಲ್ಲ, ನಿರ್ಲಕ್ಷ್ಯ ಮಾಡದೆ ಲಸಿಕೆ ಹಾಕಿಸಿಕೊಳ್ಳಬೇಕು. ಎಲ್ಲರೂ ಒಟ್ಟಾಗಿ ಕೊರೊನಾ ಸೋಂಕು ಸೋಲಿಸಬೇಕಾಗಿದೆ.
ಇದನ್ನು ಒದಿ : https://cnewstv.in/?p=6928
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments