Cnewstv.in / 28.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ವಿದ್ಯಾನಗರದ SBI ಬ್ಯಾಂಕಿನಲ್ಲಿ ಆಕಸ್ಮಿಕ ಬೆಂಕಿ
ಶಿವಮೊಗ್ಗ : ವಿದ್ಯಾನಗರದ SBI ಬ್ಯಾಂಕಿನಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ನಗರದ ಹೊರವಲಯ ವಿದ್ಯಾನಗರದಲ್ಲಿರುವ SBI ಬ್ಯಾಂಕಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರಬಹುದು ಎಂದು ಶಂಕಿಸಲಾಗಿದೆ. ಇದು ಭಾನುವಾರ ಆಗಿರುವುದರಿಂದ ಬ್ಯಾಂಕ್ ರಜೆ ಇದ್ದು, ದಟ್ಟ ಹೊಗೆ ಆವರಿಸಿದ ನಂತರವೇ ಬೆಂಕಿ ಹತ್ತಿಕೊಂಡಿರುವ ವಿಚಾರ ತಿಳಿದುಬಂದಿದೆ. ತಕ್ಷಣವೇ ಸಾರ್ವಜನಿಕರು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ವಿಷಯ ತಿಳಿಸಿದ್ದಾರೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕಚೇರಿಯೊಳಗಿನ ಪೀಠೋಪಕರಣಗಳು ಸುಟ್ಟು ಕರಕಲಾಗಿದೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ಬರಬೇಕಿದೆ.
ಇದನ್ನು ಒದಿ : https://cnewstv.in/?p=6931
ವಿಡಿಯೋ ನ್ಯೂಸ್
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv