Cnewstv.in / 29.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಪ್ರತಿಭಟನೆಗಿಳಿದ KBP : ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ
ಶಿವಮೊಗ್ಗ : ನಗರದ ಪ್ರಮುಖ ರಸ್ತೆಯಾಗಿರುವ ಕುವೆಂಪು ರಸ್ತೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಅದನ್ನು ಖಂಡಿಸಿ ಮಾಜಿ ಶಾಸಕ ಕೆ ಬಿ ಪ್ರಸನ್ನಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಕುವೆಂಪು ರಸ್ತೆಯಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಿಲ್ಲ. ಯಾವುದೋ ಪ್ರಭಾವಕ್ಕೆ ಒಳಗಾಗಿ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗುತ್ತಿದೆ. ಬಾಕ್ಸ್ ಚರಂಡಿಯನ್ನು ನಕ್ಷೆ ಪ್ರಕಾರ, ನೇರವಾಗಿ ಮಾಡದೆ, ತಿರುವು ಪಡೆದುಕೊಂಡು ಅವೈಜ್ಞಾನಿಕವಾಗಿ ಮಾಡಲಾಗಿದೆ ನಕ್ಷೆಯ ಪ್ರಕಾರ ಕಾಮಗಾರಿ ನಡೆದಿಲ್ಲ ಎಂದು ಆರೋಪಿಸಲಾಯಿತು.
ಮಾತಿನ ಚಕಮಕಿ :
ಮಾಜಿ ಶಾಸಕರಾದ ಕೆ. ಬಿ ಪ್ರಸನ್ನ ಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕುವೆಂಪು ರಸ್ತೆಗೆ ಅಡ್ಡಲಾಗಿ ಪ್ರತಿಭಟನೆ ನಡೆಸುತ್ತಿದ್ದರು ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ ಒಂದು ಬದಿಯಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಲಕಾಲ ಪೊಲೀಸರಿಗೂ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಇದನ್ನು ಒದಿ : https://cnewstv.in/?p=6933
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv