Cnewstv.in / 29.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೂರು ಸಾವಿರಕ್ಕಿಂತ ಹೆಚ್ಚು ಮತ ಪಡೆದು ಗೆಲ್ಲುತ್ತೇವೆ – ಡಿ.ಎಸ್.ಅರುಣ್
ಶಿವಮೊಗ್ಗ : ನಮ್ಮ ಪಕ್ಷಕ್ಕೆ ಎಲ್ಲಾ ಕಡೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ. ಅತ್ಯಂತ ಸುಲಭವಾಗಿ ನಾವು ಮೂರು ಸಾವಿರಕ್ಕಿಂತಲೂ ಹೆಚ್ಚು ಮತಗಳನ್ನು ಪಡೆದು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ವ್ಯಕ್ತಪಡಿಸಿದರು
ಜಿಲ್ಲೆಯಲ್ಲಿ ಒಟ್ಟು ಮತದಾರರಲ್ಲಿ ಶೇಕಡ 93.5 ರಷ್ಟು ಗ್ರಾಮ ಪಂಚಾಯಿತಿ ಸದಸ್ಯರು ಇದ್ದಾರೆ. ಇನ್ನುಳಿದಂತೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಸದಸ್ಯರಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಾಗಿ ಗೆಲುವು ಸಾಧಿಸಿದ್ದಾರೆ. ಹಾಗಾಗಿ ಅಂದಾಜಿನಂತೆ 3000ಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ ಎಂದರು.
ಶಿಕ್ಷಣ ಆರೋಗ್ಯ ಸ್ವಚ್ಛತೆ ಈ ಮೂರು ಇಂದು ಅಗತ್ಯವಾಗಿದೆ. ಶಿಕ್ಷಣಕ್ಕೆ ಆದ್ಯತೆ ಕೊಡಬೇಕಾದದ್ದು ನಮ್ಮ ಕರ್ತವ್ಯ ಕೂಡ ಆಗಿದೆ. ನಾನು ಆಯ್ಕೆಯಾದರೆ ಇನ್ನೂರಕ್ಕೂ ಹೆಚ್ಚಿನ ಆದ್ಯತೆಯನ್ನು ನೀಡುತ್ತೇನೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಶಿಬಿರಗಳನ್ನು ಏರ್ಪಡಿಸಿ ಸೌಲಭ್ಯಗಳನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯವಾದ ವಾತಾವರಣವನ್ನು ರೂಪಿಸಬೇಕು ಎಂದರು.
ಇದನ್ನು ಒದಿ : https://cnewstv.in/?p=6940
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv