Cnewstv.in / 30.11.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಂಸತ್ ಚಳಿಗಾಲದ ಅಧಿವೇಶನ, ಮೊದಲ ದಿನವೇ 12 ವಿಪಕ್ಷ ಸಂಸದರ ಅಮಾನತು.
ನವದೆಹಲಿ : ಸಂಸತ್ ಅಧಿವೇಶನ ಆರಂಭವಾದ ಮೊದಲ ದಿನವೇ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ 12 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ.
ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲವನ್ನು ಸೃಷ್ಟಿಸಿದರು. ಕೃಷಿ ಕಾಯ್ದೆ ಮಸೂದೆ, ಪೆಗಾಸನ್ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಿರಂತರವಾಗಿ ಸದನಕ್ಕೆ ಅಡ್ಡಿಪಡಿಸಲಾದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಉಪಸಭಾಪತಿ ಹರಿವಂಶ ನಾರಾಯಣ ಸಿಂಗ್ ಅವರು ಅಮಾನತು ಘೋಷಿಸಿದರು.
ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಫೂಲೋ ದೇವಿ ನೇತಮ್, ಛಾಯಾ ವರ್ಮಾ, ರಿಪುನ್ ಬೋರಾ, ರಾಜಮಣಿ ಪಟೇಲ್, ಸೈಯದ್ ನಾಸಿರ್ ಹುಸೇನ್ ಮತ್ತು ಅಖಿಲೇಶ್ ಪ್ರಸಾದ್ ಸಿಂಗ್ ರವರನ್ನು ಅಮಾನತುಗೊಂಡಿದ್ದಾರೆ.
ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ ಮತ್ತು ಅನಿಲ್ ದೇಸಾಯಿ, ಟಿಎಂಸಿಯ ಡೋಲಾ ಸೇನ್ ಮತ್ತು ಶಾಂತಾ ಛೆಟ್ರಿ, ಸಿಪಿಎಂನಿಂದ ಎಲಮರಮ್ ಕರೀಂ ಮತ್ತು ಸಿಪಿಐನಿಂದ ಬಿನೋಯ್ ವಿಶ್ವಂ ಅವರು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡ ವಿರೋಧ ಪಕ್ಷದ ಸಂಸದರಾಗಿದ್ದಾರೆ.
ಇದನ್ನು ಒದಿ : https://cnewstv.in/?p=6952
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments