Cnewstv.in / 30.11.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಾಲ ಯೋಜನೆಯಡಿ ಅರ್ಜಿ ಆಹ್ವಾನ.
ಶಿವಮೊಗ್ಗ : ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ ನಿಯಮಿತದಿಂದ ಸವಿತಾ ಹಾಗೂ ಅದರ ಉಪ ಜಾತಿಗಳಿಗೆ 2021-22 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು 2022 ರ ಜನರಿ 10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆಯಡಿ ಕುಲಕಸುಬು/ಸಾಂಪ್ರದಾಯಿಕ ವೃತ್ತಿಗಳಾದ ಕ್ಷೌರಿಕ ವೃತ್ತಿ, ಬ್ಯುಟೀಷಿಯನ್, ಡೋಲು, ವಾದ್ಯ ಮತ್ತು ಬ್ಯಾಂಡ್‍ಸೆಟ್ ಮುಂತಾದ ವೃತ್ತಿಗಳನ್ನು ಹಾಗೂ ಕೌಶಲ್ಯತೆ ಹೊಂದಿರುವ ವೃತ್ತಿಗಳನ್ನು ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರಕಲಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ, ಮುಂತಾದ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯವಿದೆ.
ಈ ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000 ಗಳು ಮತ್ತು ಪಟ್ಟಣ ಪ್ರದೇಶದವರಿಗೆ ರೂ.1,20,000 ಗಳ ಒಳಗಿರಬೇಕು. ಮತ್ತು ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯೊಳಗಿರಬೇಕು. ಒಮ್ಮೆ ಈ ಯೋಜನೆ ಸೌಲಭ್ಯ ಪಡೆದವರಿಗೆ ಮತ್ತೊಮ್ಮೆ ಅವಕಾಶ ಇರುವುದಿಲ್ಲ.
ಅರ್ಜಿ ನಮೂನೆಯನ್ನು ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ಅಥವಾ ನಿಗಮದ ವೆಬ್‍ಸೈಟ್ ನಲ್ಲಿ ಹಾಗೂ ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ನಮೂನೆ ಮತ್ತು ವಿವರ ಪಡೆಯಬಹುದು. ಹಾಗೂ ನಿಗಮದ ಜಿಲ್ಲಾ ಕಚೇರಿ ಸಹಾಯವಾಣಿ ದೂರವಾಣಿ ಸಂಖ್ಯೆ : 08182-229634 ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=6957
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments