Cnewstv.in / 30.11.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸ್ಮಾರ್ಟ್ ಸಿಟಿ ಕಾಮಗಾರಿಯು ನಗರದಲ್ಲಿ ಸಂಪೂರ್ಣ ಅವೈಜ್ಞಾನಿಕ ಹಾಗೂ ಕಳಪೆಯಾಗಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಿ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 394 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆದರೆ ಆ ಹಣವನ್ನು ಎಲ್ಲಿ ಖರ್ಚು ಮಾಡಿದ್ದಾರೆ ಎಂದು ಗೊತ್ತೇ ಇಲ್ಲ. ಅನುಭವವೇ ಇಲ್ಲದ ಗುತ್ತಿಗೆದಾರರು ಸ್ಮಾರ್ಟ್ ಸಿಟಿ ಕೆಲಸ ಮಾಡುತ್ತಿದ್ದರೆ. ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಸಹ ಅಧಿಕಾರಿಗಳು ಪ್ರಶ್ನೆ ಮಾಡುತ್ತಿಲ್ಲ.
ಕೂಡಲೇ ಟೆಂಡರ್ ಪ್ರಕ್ರಿಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆಗ್ರಹಿಸಿದರು.
ಇದನ್ನು ಒದಿ : https://cnewstv.in/?p=6959
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv