Cnewstv.in / 30.11.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ.
ಬೆಂಗಳೂರು : ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕೊರೊನಾ ಹೊಸ ರೂಪಾಂತರಿ ವೈರಸ್ ಹಲವು ದೇಶಗಳಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದರು.
ಈಗಾಗಲೇ 12 ದೇಶಗಳಲ್ಲಿ ಕೊರೊನಾ ದ ಹೊಸ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲೂ ಈ ವೈರಸ್ ಬರಬಹುದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ನಿಯಮವನ್ನು ಕಡ್ಡಾಯ ಮಾಡಲಾಗಿದೆ.
ರಾಜ್ಯಕ್ಕೆ ಪ್ರತಿದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದಾರೆ. ಪ್ರತಿಯೊಬ್ಬರಿಗೂ ಅರ್ ಟಿಪಿಸಿಅರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ. ನೆಗೆಟಿವ್ ಇದ್ದವರಿಗೆ 7 ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ.
ರೋಗಲಕ್ಷಣ ವಿದ್ದರೂ ನೆಗೆಟಿವ್ ಬಂದವರಿಗೆ ಐದು ದಿನಗಳ ಕಾಲ ಮತ್ತೆ ಮನೆಯಲ್ಲಿ ಪರೀಕ್ಷೆ ಮಾಡಲಾಗುವುದು. ಎ ಲಕ್ಷಣವಿದ್ದರೆ ಏಳನೇ ದಿನ ಪರೀಕ್ಷೆ ಮಾಡಲಾಗುವುದು ಪಾಸಿಟಿವ್ ಬಂದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.
ಇದನ್ನು ಒದಿ : https://cnewstv.in/?p=6961
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments