Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಸಂಖ್ಯೆಯಲ್ಲಿ ಶಿವಮೊಗ್ಗ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ ??
1981 ರಲ್ಲಿ ಮೊಟ್ಟ ಮೊದಲಿಗೆ ಅಮೇರಿಕಾದ ಲಾಸ್ ಏಂಜಲೀಸ್ ಪ್ರದೇಶದಲ್ಲಿ ವ್ಯಕ್ತಿಯೋರ್ವನಲ್ಲಿ ಹೆಚ್‍ಐವಿ ಸೋಂಕು ಕಂಡು ಬಂದಿತು. ಇದೊಂದು ಮಾರಣಾಂತಿಕ ಸೋಂಕಾಗಿದ್ದು ಈ ಕುರಿತು ಜಾಗೃತಿ ಮೂಡಿಸಲು ಮತ್ತು ನಿಯಂತ್ರಣ ಸಾಧಿಸುವ ಸಲುವಾಗಿ 1988 ರಿಂದ ವಿಶ್ವ ಏಡ್ಸ್ ದಿನಾಚರಣೆ ಮಾಡಲಾಗುತ್ತಿದೆ.
ಹೆಚ್‍ಐವಿ ಸೋಂಕು ಅಸುರಕ್ಷಿತ ಲೈಂಗಿಕ ಸಂಪರ್ಕ, ಸಂಸ್ಕರಿಸದ ಸೂಜಿ ಮತ್ತು ಸಿರಂಜ್ ಬಳಕೆ, ತಪಾಸಣೆಗೊಳಪಡಿಸದ ರಕ್ತ ಮತ್ತು ಅದರ ಪದಾರ್ಥಗಳು ಹಾಗೂ ಗರ್ಭದಿಂದ ತಾಯಿಯಿಂದ ಮಗುವಿಗೆ ಈ ನಾಲ್ಕು ಮಾರ್ಗಗಳಿಂದ ಬರುತ್ತದೆ. ಆದರೆ ಇತ್ತೀಚಿನ ಸುಧಾರಣೆಗಳಿಂದಾಗಿ ರಕ್ತ, ಸೂಜಿ ಮತ್ತು ತಾಯಿಯಿಂದ ಮಗುವಿಗೆ ಬರುವುದನ್ನು ನಿಯಂತ್ರಿಸಲಾಗಿದೆ. ಈ ಬಗ್ಗೆ ಶಿಕ್ಷಣ ಮತ್ತು ಅರಿವು ಹೆಚ್ಚಬೇಕು.
ಶಿವಮೊಗ್ಗ ಜಿಲ್ಲೆಯಲ್ಲಿ 2015-16 ರಿಂದ ಅಕ್ಟೋಬರ್ 2021 ರವರೆಗೆ 4,24,017 ಸಾಮಾನ್ಯ ವ್ಯಕ್ತಿಗಳಿಗೆ ಹೆಚ್‍ಐವಿ ಪರೀಕ್ಷೆ ಮಾಡಿದ್ದು ಈ ಪೈಕಿ 2054 ಸೋಂಕಿತರು ಪತ್ತೆಯಾಗಿದ್ದಾರೆ. ಈ ಅಔದಿಯಲ್ಲಿ 2,21,600 ಗರ್ಭಿಣಿಯರಿಗೆ ಹೆಚ್‍ಐವಿ ಪರೀಕ್ಷೆ ಮಾಡಿದ್ದು ಇವರಲ್ಲಿ 79 ಗರ್ಭಿಣಿ ಸ್ತ್ರೀಯರಿದ್ದಾರೆ. ಹೆಚ್‍ಐವಿ ಚಿಕಿತ್ಸೆಗಾರಿ ಎಆರ್‍ಟಿ ಕೇಂದ್ರದಲ್ಲಿ 2008 ರಿಂದ 2021 ರವರೆಗೆ 6249 ವ್ಯಕ್ತಿಗಳು ನೋಂದಾಯಿಸಿಕೊಂಡಿದ್ದು 3161 ಜನರು ಚಿಕತ್ಸೆ ಪಡೆದು ಬದುಕುತ್ತಿದ್ದಾರೆ. 2089 ಜನರು ಸೋಂಕಿನಿಂದ ಮರಣ ಹೊಂದಿದ್ದಾರೆ.
ರಾಜ್ಯದಲ್ಲಿ ಹೆಚ್‍ಐವಿ ಸೋಂಕಿನಲ್ಲಿ ಶಿವಮೊಗ್ಗ ಜಿಲ್ಲೆ 14 ನೇ ಸ್ಥಾನದಲ್ಲಿದೆ. ಜಿಲ್ಲಾಸ್ಪತ್ರೆಯಲ್ಲಿ 01 ಎಆರ್‍ಟಿ ಕೇಂದ್ರ ಮತ್ತು 11 ಉಪ ಕೇಂದ್ರಗಳು, 02 ಲೈಂಗಿಕ ರೋಗಗಳ ಚಿಕಿತ್ಸಾ ಕೇಂದ್ರ, 08 ರಕ್ತನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, 12 ಆಪ್ತಸಮಾಲೋಚನಾ ಹಾಗೂ ಪರೀಕ್ಷಾ ಕೇಂದ್ರಗಳು, 106 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು 15 ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.
ಇದನ್ನು ಒದಿ : https://cnewstv.in/?p=6977
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv