Cnewstv.in / 1.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್.
ಶಿವಮೊಗ್ಗ : ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಹೆಚ್‍ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಸ್ಥೈರ್ಯ ತುಂಬುವುದೇ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದ್ದು, ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕೆಂದು ವಿಡಿಎಲ್ ಉಪನಿರ್ದೇಶಕ ಡಾ.ರಘುನಂದನ್ ಹೇಳಿದರು.
ನಗರದ ಐಎಂಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಏಡ್ಸ್ ಖಾಯಿಲೆ ಬಗ್ಗೆ ತಿಳಿಯುವುದು ಅತ್ಯವಶ್ಯವಾಗಿದೆ. ಆದರೆ ಏಡ್ಸ್ ಪ್ರಸ್ತುತ ಮಾರಣಾಂತಿಕವಲ್ಲ. ಸೂಕ್ತ ಮತ್ತು ನಿಯಮಿತ ಚಿಕಿತ್ಸೆಯಿಂದ ಇದನ್ನು ನಿಯಂತ್ರಿಸಬಹುದು. ಹೆಚ್‍ಐವಿ ಪೀಡಿತರನ್ನು ಎಲ್ಲರಂತೆ ಕಾಣಬೇಕು.
ಏಡ್ಸ್ ಬಗ್ಗೆ ಇರುವ ಮೌಢ್ಯತೆಯನ್ನು ಮಟ್ಟ ಹಾಕುವ ದಿನ ಇದಾಗಿದ್ದು, ಇದೂ ಕೂಡ ಸಕ್ಕರೆ ಮತ್ತು ಇತರೆ ಖಾಯಿಲೆ ರೀತಿಯ ಒಂದು ಖಾಯಿಲೆಯಾಗಿದೆ. ಚಿಕಿತ್ಸೆಯಿಂದ ಸೂಕ್ತವಾಗಿ ನಿಯಂತ್ರಿಸಬಹುದು ಹಾಗೂ ಈ ಸೋಂಕಿನ ಕುರಿತಾದ ಅರಿವಿನಿಂದ ಇದನ್ನು ದೂರ ಇಡಬಹುದು.ಕೇವಲ ಅಸುರಕ್ಷಿತ ಲೈಂಗಿಕತೆಯಿಂದ ಮಾತ್ರ ಈ ಸೋಂಕು ಬರುವುದಿಲ್ಲ. ಆದ್ದರಿಂದ ಇವರನ್ನು ತಾರತಮ್ಯದಿಂದ ನೋಡದೆ ಎಲ್ಲರಂತೆ ಕಾಣಬೇಕು ಎಂದು ಕಿವಿಮಾತು ಹೇಳಿದರು.
ಸರ್ಕಾರೇತರ ಸಂಸ್ಥೆಗಳಾದ ಅಭಯಧಾಮ ಹೆಚ್‍ಐವಿ ಸೋಂಕಿತರ ಬೆಂಬಲ ಸಂಘ, ರಕ್ಷ ಸಮುದಾಯ ಸಂಘ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಅಂತಹ ಸಂಸ್ಥೆಗಳು ಹೆಚ್‍ಐವಿ ನಿಯಂತ್ರಣ ಕಾರ್ಯಕ್ರಮದಡಿ ಕೆಲಸ ಮಾಡುತ್ತಿವೆ ಎಂದು ಮಾಹಿತಿ ನೀಡಿದರು.
ಇದನ್ನು ಒದಿ : https://cnewstv.in/?p=6981
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments