Cnewstv.in / 2.12.2021/ ಅಮೆರಿಕ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಅಮೆರಿಕದಲ್ಲಿ ಮೊದಲ ಒಮಿಕ್ರೋನ್ ಪ್ರಕರಣ ಪತ್ತೆ.
ಅಮೆರಿಕ : ಒಮಿಕ್ರೋನ್ ರೂಪಾಂತರ ವೈರಸ್ ಇದೀಗ ವಿಶ್ವಾದ್ಯಂತ ಭೀತಿ ಮೂಡಿಸಲು ಆರಂಭಿಸಿದೆ. ಈಗಾಗಲೇ ಬ್ರಿಟನ್ ಆಸ್ಟ್ರೇಲಿಯಾ, ಜರ್ಮನಿ ಸೇರಿದಂತೆ 13 ದೇಶಗಳಲ್ಲಿ ಒಮಿಕ್ರೋನ್ ರೂಪಾಂತರ ವೈರಸ್ ಕಂಡುಬಂದಿದೆ. ಅಮೆರಿಕಾದಲ್ಲೂ ಸಹಾ ಒಮಿಕ್ರೋನ್ ಮೊದಲ ಪ್ರಕರಣ ಪತ್ತೆಯಾಗಿದೆ.
ಅಮೇರಿಕಾ ಅಧ್ಯಕ್ಷರ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಪೌಸಿ ಈ ಮಾಹಿತಿಯನ್ನು ನೀಡಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ರೂಪಾಂತರಿ ಒಮಿಕ್ರೋನ್ ಅಮೆರಿಕದಲ್ಲೂ ಪತ್ತೆಯಾಗಿದೆ. ಒಮಿಕ್ರೋನ್ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರು ಲಸಿಕೆ ಪಡೆಯುವಂತೆ ವೈಟ್ ಹೌಸ್ ನಲ್ಲಿ ಮನವಿ ಮಾಡಲಾಯಿತು.
ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ವ್ಯಕ್ತಿಯಲ್ಲಿ ಒಮಿಕ್ರೋನ್ ಪತ್ತೆಯಾಗಿದೆ. ಕ್ಯಾಲಿಫೋರ್ನಿಯಾದಲ್ಲಿ ವಾಸವಾಗಿರುವ ವ್ಯಕ್ತಿಯಲ್ಲಿ ಹೊಸ ರೂಪಾಂತರ ವೈರಸ್ ಕಂಡುಬಂದಿದೆ. ನವೆಂಬರ್ 22 ರಂದು ದಕ್ಷಿಣ ಆಫ್ರಿಕಾದಿಂದ ಬಂದಿದ್ದು, ನವೆಂಬರ್ 19ರಂದು ಕೋವಿಡ್ ಪಾಸಿಟಿವ್ ಕಂಡುಬಂದಿತ್ತು. ಸೋಂಕಿತ ವ್ಯಕ್ತಿಯು ಸ್ವಯಂ ಕ್ವಾರಂಟೈನ್ ಆಗಿದ್ದಾನೆ. ಇವನ ಸಂಪರ್ಕಿತರ ವರದಿ ನೆಗೆಟಿವ್ ಬಂದಿದೆ. ಸೊಂಕಿತ ಈಗಾಗಲೇ ಕೋವಿಡ್ ಲಸಿಕೆಯನ್ನು ಪಡೆದಿದ್ದಾನೆ ಎಂಬ ಮಾಹಿತಿಯನ್ನು ಸಹ ನೀಡಿದ್ದಾರೆ.
ಇದನ್ನು ಒದಿ : https://cnewstv.in/?p=6987
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments