Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕಾಲೇಜು ವಸತಿ ನಿಲಯಗಳನ್ನು ಆರಂಭಿಸುವಂತೆ ಎನ್ ಎಸ್ ಯು ಐ ವತಿಯಿಂದ ಪ್ರತಿಭಟನೆ.
ಶಿವಮೊಗ್ಗ : ಶಾಲಾ-ಕಾಲೇಜುಗಳು ಆರಂಭವಾದವು ಸಹ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸುತ್ತಿರುವ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಆರಂಭಿಸದೆ ಇರುವುದನ್ನು ಖಂಡಿಸಿ ಜಿಲ್ಲಾ ಎನ್ ಎಸ್ ಯು ಐ ವತಿಯಿಂದ ಜಿಲ್ಲಾ ಪಂಚಾಯತ್ ಸಿಇಒ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ನವಂಬರ್ ಎಂಟರಿಂದ ಪೂರ್ಣ ಅವಧಿಯಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದೆ. ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯೂ ಸಹ ಮುಗಿದಿದೆ ಆದರೂ ಸಹ ಸರ್ಕಾರ ವಿದ್ಯಾರ್ಥಿ-ವಿದ್ಯಾರ್ಥಿನಿಯರ ವಸತಿ ನಿಲಯಗಳನ್ನು ಆರಂಭಿಸಿಲ್ಲ. ಇದು ಗ್ರಾಮೀಣ ಪ್ರದೇಶದಿಂದ ಬರುವಂತಹ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಕೂಡಲೇ ವಿದ್ಯಾರ್ಥಿನಿಲಯಗಳಿಗೆ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ, ವಿದ್ಯಾರ್ಥಿನಿಲಯವನ್ನು ಆರಂಭಿಸಬೇಕು ಇಲ್ಲವಾದರೆ ತೀವ್ರ ಪ್ರತಿಭಟನೆ ನಡೆಸುವುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎನ್ ಎಸ್ ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ ಎಚ್ ಎಸ್, ಚೇತನ್ ಕೆ, ರವಿಕುಮಾರ್, ವಿಜಯ್ ಕುಮಾರ್, ಕಿರಣ್, ಆಕಾಶ್ ಭರತ್, ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=6990
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv