Cnewstv.in / 02.12..2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್.
ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇಷ್ಟು ದಿನ ಒಂದಂಕಿಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಎರಡಂಕಿಗೆ ಏರಿಕೆಯಾಗುತ್ತಿದೆ.
ಶಿವಮೊಗ್ಗದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಶಿವಮೊಗ್ಗದ ಗಾಡಿಕೊಪ್ಪದ ಬಳಿ ಇರುವ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೇರಳದಿಂದ ನರ್ಸಿಂಗ್ ವಿದ್ಯಾರ್ಥಿಗಳು ವಾಪಸ್ಸಾಗಿದ್ದರು ಎನ್ನಲಾಗಿದೆ.
ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನರ್ಸಿಂಗ್ ಕಾಲೇಜಿನನ್ನು ಸಿಲ್ ಡೌನ್ ಮಾಡಲಾಗಿದೆ. ನಂಜಪ್ಪ ಲೈಫ್ ಕೇರ್ ಹಾಸ್ಟೆಲ್ ಹಾಗೂ ಆಸ್ಪತ್ರೆಯ ಒಪಿಡಿ ಸೇರಿದಂತೆ ಎಲ್ಲವನ್ನೂ ಸಹ ಬಂದ್ ಮಾಡಲಾಗಿದೆ.
ಕಾಲೇಜಿನಲ್ಲಿರುವ ಹಾಗೂ ಆಸ್ಪತ್ರೆಯಲ್ಲಿರುವ ಎಲ್ಲಾ ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ಇದನ್ನು ಒದಿ : https://cnewstv.in/?p=6992
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments