Breaking News

ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಗೆ ಅರ್ಜಿ ಆಹ್ವಾನ

Cnewstv.in / 2.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ದಿ: 12/12/2021 ರಂದು ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 04/12/2021 ರೊಳಗಾಗಿ ಶಾಲಾ ಮುಖ್ಯಸ್ಥರ ದೃಢೀಕರಣದೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸುವುದು.

ಒಂದು ಪ್ರತಿಯನ್ನು krvp.info@gmail.com ಇಮೇಲ್ ಮೂಲಕ ಅಥವಾ ಮೊ.ಸಂ.: 9008442557 ಗೆ ವಾಟ್ಸ್‍ಪ್ ಮೂಲಕ ಅಥವಾ ಕಾರ್ಯದರ್ಶಿ, ಕ.ರಾ.ವಿ.ಪ ಯುವ ವಿಜ್ಞಾನಿ ವಿಭಾಗ, ವಿಜ್ಞಾನ ಭವನ, ನಂ.24/2, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-560070 ಇವರಿಗೆ ಅಂಚೆ ಮೂಲಕ ತಲುಪಿಸಬಹುದಾಗಿದೆ ಎಂದು ಸಾ.ಶಿ.ಇ. ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಒದಿ : https://cnewstv.in/?p=6999

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*