Breaking News

ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ – ಡಿ.ಕೆ.ಶಿವಕುಮಾರ್.

Cnewstv.in / 03.12.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ – ಡಿ.ಕೆ.ಶಿವಕುಮಾರ್.

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಇಂದು ಚುನಾಯಿತ ಪ್ರತಿನಿಧಿಗಳ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಪ್ರಸನ್ನಕುಮಾರ್ ಪರವಾಗಿ ಮತಯಾಚನೆ ಮಾಡಿದರು.

ದೇಶದಲ್ಲಿ ಅತಿ ದೊಡ್ಡ ಭ್ರಷ್ಟ ಸರ್ಕಾರವಿದ್ದರೆ ಅದು ಬಿಜೆಪಿ ಸರ್ಕಾರ ಮಾತ್ರ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ವಾತಾವರಣವಿದೆ. ಬಿಜೆಪಿ ಆಡಳಿತ ರಾಜ್ಯದಲ್ಲಿ ಮುಗಿದ ಅಧ್ಯಾಯವಾಗಲಿದೆ. ಬಿಜೆಪಿ 40% ಸರ್ಕಾರವಾಗಿದೆ. ನಾವು ಮತ್ತೆ ಬರುತ್ತೇವೆ ಶಿವಮೊಗ್ಗದಲ್ಲಿ ರಣರಂಗ ಆರಂಭ ಮಾಡುತ್ತೇವೆ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದ್ದರು ಸಹ ಯಾವುದೇ ರೀತಿಯಾದಂತಹ ಕೆಲಸವನ್ನ ಮಾಡಿಲ್ಲ. ಮಧು ಬಂಗಾರಪ್ಪ ಸೇರಿದಂತೆ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಈ ಬಾರಿ ಸೇರಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಬಲ ಬಂದಂತಾಗಿದೆ.

ಬಿಜೆಪಿಗೆ ಸೋಲಿನ ಭಯ :

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರು ಸಹ ಸೋಲಿನ ಭಯ ಕಾಡುತ್ತಿದೆ. ಅದೇ ಕಾರಣಕ್ಕೆ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯನ್ನು ಮಾಡುತ್ತಿಲ್ಲ. ಕಾಂಗ್ರೆಸ್ ಈ ಬಾರಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯಲಿದೆ ಎಂದರು

ಇದನ್ನು ಒದಿ : https://cnewstv.in/?p=7024

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*