Cnewstv.in / 03.12.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಕೊರೋನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಪ್ರಯಾಣಿಸಿದ ಇಬ್ಬರಲ್ಲಿ ಮೊದಲಬಾರಿಗೆ ಈ ಒಮಿಕ್ರಾನ್ ವೈರಸ್ ಕಾಣಿಸಿಕೊಂಡಿದೆ. ಅವರ ಸಂಪರ್ಕದಲ್ಲಿದ್ದ ಐವರಿಗೂ ಸಹ ಪಾಸಿಟಿವ್ ವರದಿಯಾಗಿದೆ. ಒಮಿಕ್ರಾನ್ ಸೋಂಕು ಮತಷ್ಟು ಹರಡುವುದನ್ನು ತಡೆಗಟ್ಟುವುದಕ್ಕಾಗಿ ಸಿಎಂ ಬೊಮ್ಮಾಯಿ ತಜ್ಞರ ನೇತೃತ್ವದಲ್ಲಿ ಸಭೆ ನಡೆಸಿ, ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಹೊಸ ಮಾರ್ಗಸೂಚಿ ಅನ್ವಯ ನಿಯಮಗಳು.
* ವಿದೇಶದಿಂದ ಬರುವವರಿಗೆ ವಿಮಾನ ನಿಲ್ದಾಣದಲ್ಲಿ ಆರ್‍ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ. ಪಾಸಿಟಿವ್ ಕಂಡು ಬಂದರೆ ವಿಮಾನ ನಿಲ್ದಾಣದ ಸುತ್ತಮುತ್ತಲು ತಂಗಲು ವ್ಯವಸ್ಥೆ ಮಾಡಲಾಗುವುದು.
*ಪ್ರತಿದಿನ 1 ಲಕ್ಷ ಕೋವಿಡ್ ಟೆಸ್ಟ್ ನಡೆಸಲು ಸೂಚನೆ.
*ಶಾಲಾ ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಬಾರದು.
*ಆರೋಗ್ಯ ಇಲಾಖೆಗೆ ಆಕ್ಸಿಜನ್ ಬೆಡ್ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಮಾಡಿಕೊಳ್ಳಲು ಸೂಚಿಸಲಾಗಿದೆ.
*ಎರಡು ಡೋಸ್ ವ್ಯಾಕ್ಸಿನೇಷನ್ ಆಗಿದ್ದರೆ ಮಾತ್ರ ಮಾಲ್, ಥಿಯೇಟರ್‍ಗಳಿಗೆ ಎಂಟ್ರಿ.
* ಶಾಲಾ ಕಾಲೇಜು ವಿದ್ಯಾರ್ಥಿಗಳ ಪೋಷಕರಿಗೆ ವ್ಯಾಕ್ಸಿನೇಷನ್ ಕಡ್ಡಾಯವಾಗಿರುತ್ತದೆ.
*ಕೇರಳ, ಮಹಾರಾಷ್ಟ್ರದಿಂದ ಬರುವವರೆಗೆ ಆರ್‍ಟಿಪಿಸಿಆರ್ ವರದಿ ಕಡ್ಡಾಯವಾಗಿದೆ.
*ಮದುವೆಯಲ್ಲಿ 500 ಮಂದಿಗೆ ಮಾತ್ರ ಅವಕಾಶ.
*ಈಗಾಗಲೇ ಆರ್‍ಟಿಪಿಸಿಆರ್ ನೆಗೆಟಿವ್ ವರದಿಯನ್ನು ಪಡೆದಿರುವ, ಹಾಸ್ಟೆಲ್‍ಗಳಲ್ಲಿ ಉಳಿದುಕೊಂಡಿರುವ ಕೇರಳದ ವಿದ್ಯಾರ್ಥಿಗಳು, ಮೊದಲ ವರದಿಯ ನಂತರ 7ನೇ ದಿನದಂದು ಮತ್ತೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯ.
*ಮಹಾರಾಷ್ಟ್ರ ಮತ್ತು ಕೇರಳ ಗಡಿಭಾಗದ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು.
*ಸರ್ಕಾರಿ ಕಚೇರಿಗಳು, ಮಾಲ್‍ಗಳು, ಹೋಟೆಲ್‍ಗಳು, ಈಜುಕೊಳಗಳು ಮತ್ತು ಥಿಯೇಟರ್‍ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಲೇಬೇಕು.
*ಎಲ್ಲಾ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಮಟ್ಟದಲ್ಲಿ ಪರೀಕ್ಷೆ ಮಾಡಲು ಕಾರ್ಯನಿರತರಾಗಬೇಕು.
*ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ನಿಮಿತ್ತ ಯಾವುದೇ ಸಾರ್ವಜನಿಕ ಸಭೆಗೆ ಅವಕಾಶವಿಲ್ಲ.
ಇದನ್ನು ಒದಿ : https://cnewstv.in/?p=7026
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments