Cnewstv.in / 06.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್.
ನವದೆಹಲಿ : ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಭಾರತಕ್ಕೆ ಆಗಮಿಸಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದರು.
21 ನೇ ವಾರ್ಷಿಕ ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಭಾಗವಹಿಸಲಿದ್ದಾರೆ. ವಿಜ್ಞಾನ ರಕ್ಷಣೆ ತಂತ್ರಜ್ಞಾನ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ. ಶೃಂಗಸಭೆ ಚರ್ಚೆಯ ನಂತರ ಎರಡು ದೇಶಗಳು 10ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ.
ರಷ್ಯಾ ಅಧ್ಯಕ್ಷರ ಜೊತೆಯಲ್ಲಿ ವಿದೇಶಾಂಗ ಮತ್ತು ರಕ್ಷಣಾ ಸಚಿವರು ಕೂಡ ಇದು ಭಾರತಕ್ಕೆ ಆಗಮಿಸಲಿದ್ದಾರೆ ಅವರ ಜೊತೆಯಲ್ಲಿ ಕೂಡ ವಿದೇಶಾಂಗ ಮಂತ್ರಿ ಹಾಗೂ ರಕ್ಷಣಾ ಮಂತ್ರಿಗಳು ಮಾತುಕತೆ ನಡೆಸಲಿದ್ದಾರೆ. ಅದರಲ್ಲೂ ಪ್ರಮುಖವಾಗಿ ಆಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ನಂತರ ಅಲ್ಲಿನ ಬೆಳವಣಿಗೆಗಳ ಬಗ್ಗೆ ಕೂಡ ಚರ್ಚೆ ನಡೆಸುವ ಸಾಧ್ಯತೆ ಇದೆ.
ಇದನ್ನು ಒದಿ : https://cnewstv.in/?p=7054
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments