Cnewstv.in / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಪಾಲಿಕೆ ಆಡಳಿತದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು, ಅಣ್ಣಾ ಹಜಾರೆ ಹೋರಾಟ ಸಮಿತಿಯಿಂದ ಎಚ್ಚರಿಕೆ.
ಶಿವಮೊಗ್ಗ: ಮಹಾನಗರ ಪಾಲಿಕೆಗೆ ಸೇರಿದ ಜಾಗ ಪರಭಾರೆಯಾಗುತ್ತಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಈ ಕಾರ್ಯವನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಇಂದು ಪಾಲಿಕೆ ಎದುರು ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಊರುಗಡೂರು ಗ್ರಾಮದ ಈ ಊರುಗಡೂರು ಗ್ರಾಮದ ಈ ಜಾಗವು ಮಹಾನಗರಪಾಲಿಕೆಗೆ ಸೇರಿದ್ದು ಎಂದು ದಾಖಲೆಗಳ ಆಧಾರದಲ್ಲಿ ಸ್ಪಷ್ಟವಾಗಿ ಕಂಡುಬಂದಿರುತ್ತದೆ. ಮಹಾರಾಜರ ಕಾಲದಲ್ಲಿಯೇ ಸದರಿ ಜಾಗವನ್ನು ಉದ್ಯಾನವನಕ್ಕಾಗಿ ನೀಡಲಾಗಿತ್ತು. ಆದರೆ ಈ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಪಾಲಿಕೆಯ ಸ್ವತ್ತಿನಲ್ಲಿ ಪರವಾನಗಿ ಪಡೆಯದೇ ಕಳೆದ 5 ವರ್ಷದಿಂದ ಕಟ್ಟಡ ಕಾಮಗಾರಿ ನಡೆಸಿಕೊಂಡು ಬರುತ್ತಿದೆ.
ಈಗಾಗಲೇ ಮಹಾನಗರ ಪಾಲಿಕೆಯಿಂದ ಐದು ಬಾರಿ ನೋಟಿಸ್ ನೀಡಲಾಗಿದೆ. ಇದು ಮಹಾನಗರ ಪಾಲಿಕೆ ಆಸ್ತಿ ಎಂದು ಅರ್ಜಿದಾರರಿಗೆ ಹಿಂಬರಹ ನೀಡಿದ್ದಾರೆ. ಅದರೂ ಕೂಡ ಅವರು ಈ ಜಾಗದಲ್ಲಿ ಅಕ್ರಮ ಕಟ್ಟಡ ಕಟ್ಟಿದ್ದಾರೆ ಎಂದು ದೂರಿದ್ದಾರೆ.
ಇದಕ್ಕೆ ಯಾವುದೇ ರಸ್ತೆ ಸಂಪರ್ಕ ಇಲ್ಲದಿದ್ದರೂ ಕಚ್ಚಾರಸ್ತೆ ನಿರ್ಮಿಸಲಾಗಿದೆ. ಅದ್ದರಿಂದ ಜಿಲ್ಲಾಧಿಕಾರಿಗಳು ಮಹಾನಗರಪಾಲಿಕೆಯ ದಾಖಲೆಗಳಲ್ಲಿ ಸದರಿ ಸ್ವತ್ತನ್ನು ಪಾಲಿಕೆ ಆಸ್ತಿಗೆ ಸೇರಿಸಲು ಅಗತ್ಯ ಕ್ರಮಕೈಗೊಳ್ಳಬೇಕು. 15 ದಿನದೊಳಗೆ ಆಸ್ತಿಯನ್ನು ಕಂದಾಯ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಪಾಲಿಕೆ ಆಡಳಿತದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನು ಒದಿ : https://cnewstv.in/?p=7078
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments