Cnewstv.in / 08.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ವಿಧಾನ ಪರಿಷತ್ ಚುನಾವಣೆ: ನಿಷೇದಾಜ್ಞೆ ಜಾರಿ.
ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆ-2021 ಚುನಾವಣೆ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಸಿ.ಆರ್.ಪಿ.ಸಿ.ಕಲಂ 144 ರನ್ವಯ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸುವ ಬಗ್ಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ದಿನಾಂಕ: 07,12,2021 ರ ಸಂಜೆ 4.00 ಗಂಟೆಯಿಂದ ದಿನಾಂಕ: 10.12.2021 ರ ಸಂಜೆ 4,00 ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶಿಸಿದ್ದಾರೆ.
ಮತಗಟ್ಟೆ ವ್ಯಾಪ್ತಿಯಲ್ಲಿ 05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದು, ನಿಷೇಧಿತ 100 ಮೀ ವ್ಯಾಪ್ತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣಾ ಪ್ರಚಾರ ಮಾಡುವುದನ್ನು, ಈ ನಿಷೇಧಿತ ಪ್ರದೇಶಗಳಲ್ಲಿ ಮತದಾನಕ್ಕೆ ಬಾದಕವಾಗುವಂತಹ ಯಾವುದೇ ಕೃತ್ಯ/ಬಿಟುವಟಿಕೆ ನಿಷೇಧಿಸಿದೆ. ಮತಗಟ್ಟೆ ಕೇಂದ್ರಗಳ 100 ಮೀ ವ್ಯಾಪ್ತಿಯಲ್ಲಿ ಮೊಬೈಲ್ ಮತ್ತು ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ನಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ.
ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಚೇಷ್ಟೆ, ಸಂಜ್ಞೆಗಳನ್ನುಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಪತ್ರಿಕಾ ಪ್ರಕಟಣಾ ಪತ್ರಿಕೆಗಳ, ಇತರ ಯಾವುದೇ ವಸ್ತುಗಳ ಪ್ರದರ್ಶನ ಭಿತ್ತಿಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆಗೆ ಅಪಾಯವಾಗುವ ಯಾವುದೇ ಅಪರಾಧ ಎಸಗುವಂತಹ ಕ್ರಮಗಳನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದು.
ಮತದಾನ ನಡೆಯುವ ಪ್ರದೇಶದಲ್ಲಿ 5 ಜನರಿಗಿಂತ ಹೆಚ್ಚಿನ ವ್ಯಕ್ತಿಗಳು ಗುಂಪುಗೂಡಲು/ಒಟ್ಟಾಗಿ ಓಡಾಡುವುದನ್ನು ನಿಷೇಧಿಸಿಸಲಾಗಿದೆ. ಆದರೆ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಬೇಟಿ ನೀಡುವುದಕ್ಕೆ ನಿರ್ಭಂದ ಇರುವುದಿಲ್ಲ. ಮತದಾನ ಕೇಂದ್ರದ ಪರಿಮಿತಿ 1 ಕಿ.ಮೀ. ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಭಾರಿ ಪ್ರಮಾಣದಲ್ಲಿ ಜನ ಗುಂಪುಗಾರಿಕೆ/ಸಂಚರಿಸುವುದನ್ನು ನಿಷೇಧಿಸಿದೆ. ಈ ನಿಷೇದಾಜ್ಞೆ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.
ಈ ನಿಷೇದಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ದೇವಸ್ಥಾನ/ಚರ್ಚ್/ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ತುರ್ತು ಕಾರ್ಯಾಚರಣೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಕೋವಿಡ್-19 ನಿರ್ವಹಣೆಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿರುತ್ತಾರೆ.
ಇದನ್ನು ಒದಿ : https://cnewstv.in/?p=7085
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments