Breaking News

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪಣ ತೊಟ್ಟಿರುವುದು ವಿವೇಕಾನಂದ ವಿದ್ಯಾಸಂಸ್ಥೆ : ಬಿ. ವೈ. ರಾಘವೇಂದ್ರ

Cnewstv.in / 09.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪಣ ತೊಟ್ಟಿರುವುದು ವಿವೇಕಾನಂದ ವಿದ್ಯಾಸಂಸ್ಥೆ : ಬಿ. ವೈ. ರಾಘವೇಂದ್ರ

ಶಿಕಾರಿಪುರ : 1996 ರಲ್ಲಿ ಪ್ರಾರಂಭವಾದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಮೊದಲ ಶಿಕ್ಷಣ ಸಂಸ್ಥೆಯಾಗಿ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯವು 25ನೇ ವರ್ಷದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪಣ ತೊಟ್ಟಿರುವ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಶಿಕ್ಷಣವನ್ನು ಒಂದೇ ಕ್ಯಾಂಪಸ್‌ನ ಅಡಿಯಲ್ಲಿ ನೀಡಲು ಶಿಕಾರಿಪುರದಲ್ಲಿ ಸಿಬಿಎಸ್‌ಸಿ ಶಾಲೆ, ಮೈತ್ರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು, ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಶಿಕ್ಷಣ ಕೇಂದ್ರಗಳನ್ನು ಹಾಗೂ ಶಿವಮೊಗ್ಗದಲ್ಲಿ ಬಿ.ಇಡಿ ಕಾಲೇಜು, ಸ್ಕೂಲ್ ಆಫ್ ನರ್ಸಿಂಗ್‌ ಮತ್ತು ಕಾಲೇಜ್ ಆಪ್ ನರ್ಸಿಂಗ್ ಸಂಸ್ಥೆಗಳನ್ನು ಸ್ಥಾಪಿಸಿ ಅವುಗಳ ಮೂಲಕ ಶಿಕ್ಷಣ ನೀಡಲಾಗುತ್ತಿದೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಅವರು ತಿಳಿಸಿದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ (ರಿ)
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಶಿಕಾರಿಪುರ
ಮೈತ್ರಿ ಶಿಕ್ಷಣ ಮಹಾವಿದ್ಯಾಲಯ, ಶಿವಮೊಗ್ಗ ವತಿಯಿಂದ 2020-2021 ನೇ ಸಾಲಿನ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಬಿ. ಇಡಿ ಪದವಿ ಪರೀಕ್ಷೆಯಲ್ಲಿ ಶ್ರೇಣಿ ಪಡೆದ ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ” ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಪ್ರತಿ ವರ್ಷ ವಿಶ್ವವಿದ್ಯಾಲಯದಿಂದ ಬಿ.ಇಡಿಯಲ್ಲಿ 3 ರಿಂದ 5 ರಾಂಕ್ ಗಳೊಂದಿಗೆ ಒಟ್ಟು 45 ರಾಂಕ್ ಗಳನ್ನು ಪಡೆದಿದೆ, ಮತ್ತು ಎರಡು ಬಾರಿ ಮೊದಲ ಬ್ಯಾಂಕ್ ಪಡೆದ ಹೆಗ್ಗಳಿಕೆ ಇದೆ. ನಮ್ಮ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.

ಸಾಹಿತಿಗಳು,ಕನ್ನಡ ಉಪನ್ಯಾಸಕರಾದ ತುರುವನೂರು ಮಲ್ಲಿಕಾರ್ಜುನ ಎಂ.ಎ ಅವರು “ನಾವೆಲ್ಲರೂ ಸೇರಿ ದೇಶ ಕಟ್ಟೋಣ” ವಿಷಯದಲ್ಲಿ ಉಪನ್ಯಾಸವನ್ನು ನೀಡಿದರು

ನಿಕಟಪೂರ್ವ ಮುಖ್ಯಮಂತ್ರಿಗಳು, ವಿಧಾನಸಭಾ ಸದಸ್ಯರು, ಶಿಕಾರಿಪುರ ಕ್ಷೇತ್ರ ಮತ್ತು ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಎಸ್. ಯಡಿಯೂರಪ್ಪನವರು, ವಿದ್ಯಾಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ತೇಜಸ್ವಿನಿ ರಾಘವೇಂದ್ರ, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ಶಿವಕುಮಾರ್‌ ಜಿ.ಎಸ್, ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಾಲಿನಿ ಜೆ. ಸಿಬ್ಬಂದಿ ವರ್ಗ ಮತ್ತು ಪ್ರಶಿಕ್ಷಣಾರ್ಥಿಗಳು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಮೈತ್ರಿ ಶಿಕ್ಷಣ ಮಹಾವಿದ್ಯಾಲಯ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದನ್ನು ಒದಿ : https://cnewstv.in/?p=7098

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*