Cnewstv.in / 10.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಈ ಚುನಾವಣೆ ನಾಂದಿ ಹಾಡಲಿದೆ – ಬಿಎಸ್ವೈ
ಕನಿಷ್ಠ 15 ಕ್ಷೇತ್ರಗಳನ್ನು ಗೆಲ್ಲುತ್ತೇವೆ, ಸ್ಪಷ್ಟ ಬಹುಮತ ಪಡೆಯುತ್ತೇವೆ – ಬಿ.ಎಸ್.ವೈ.
ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪುತ್ರ ಸಂಸದ ಬಿವೈ ರಾಘವೇಂದ್ರ ತಮ್ಮ ಹಕ್ಕು ಚಲಾಯಿಸಿದರು.
ವಿಧಾನಪರಿಷತ್ ಚುನಾವಣೆ ಅಭ್ಯರ್ಥಿ D.S ಅರುಣ್ ರವರೊಂದಿಗೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಪುರಸಭೆ ಆವರಣದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಬಿಎಸ್ವೈ ಹಾಗೂ ಬಿವೈ ರಾಘವೇಂದ್ರ ಮತದಾನ ಮಾಡಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ವೈ, ನಾವು ಕನಿಷ್ಠ 15 ಕ್ಷೇತ್ರಗಳಲ್ಲಿ ಗೆದ್ದೇಗೆಲ್ಲುತ್ತೇವೆ. ನಮ್ಮೆಲ್ಲಾ ಶಾಸಕರು ಬಹಳ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ.
ಡಿ.ಎಸ್ ಅರುಣ್ ರವರು ಮುನ್ನೂರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮೊದಲ ಸುತ್ತಿನಲ್ಲಿಯೇ ಗೆಲುವು ಸಾಧಿಸುತ್ತಾರೆ. ಗ್ರಾಮೀಣ ಭಾಗಗಳಲ್ಲಿ ಕಾಂಗ್ರೆಸ್ ಧೂಳೀಪಟವಾಗಿ ಬಿಜೆಪಿ ಪರವಾದ ಅಲೆ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರ ಹಿಡಿಯಲು ಈ ಚುನಾವಣೆ ನಾಂದಿ ಹಾಡಲಿದೆ ಎಂದರು.
ಇದನ್ನು ಒದಿ : https://cnewstv.in/?p=7103
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments