Cnewstv.in / 11.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಒಮಿಕ್ರಾನ್ : ಮುಂಬೈನಲ್ಲಿ ಸೆಕ್ಷನ್ 144 ಜಾರಿ
ಮುಂಬೈ : ಕೊರೊನಾ ರೂಪಾಂತರ ವೈರಸ್ ಒಮಿಕ್ರಾನ್ ಮುಂಬೈನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಕಾರಣಕ್ಕೆ ಮುಂಬೈನಲ್ಲಿ ಭಾನುವಾರ ಮತ್ತು ಶನಿವಾರ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 17 ಪ್ರಕರಣಗಳು, ರಾಜ್ಯಸ್ಥಾನ 9, ಗುಜರಾತ್ 3, ಕರ್ನಾಟಕ 2, ದೆಹಲಿಯಲ್ಲಿ ಒಂದು ಪ್ರಕರಣಗಳು ವರದಿಯಾಗಿದೆ.
ಈಗಾಗಲೇ ದೇಶದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವುದು ಮಹಾರಾಷ್ಟ್ರದಲ್ಲಿ ಹಾಗಾಗಿ ಮತ್ತಷ್ಟು ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಮೂರು ವರ್ಷದ ಮಗುವಿಗೆ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಸೇರಿದಂತೆ, ಒಟ್ಟು ಏಳು ಜನರಿಗೆ ಹೊಸ ವೈರಸ್ ಇರುವುದು ದೃಡಪಟ್ಟಿದೆ. ಪಿಂಪ್ರಿ ಚಿಂಚ್ ವಾಡ್ ನಗರದಲ್ಲಿ ನಾಲ್ಕು, ಮುಂಬೈನಲ್ಲಿ ಮೂರು ಪ್ರಕರಣಗಳು ಕಂಡು ಬಂದಿದೆ.
ಇದನ್ನು ಒದಿ : https://cnewstv.in/?p=7109
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv