Breaking News

ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ.

Cnewstv.in / 11.12.2021/ ಬೆಂಗಳೂರು – ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ.

ಬೆಂಗಳೂರು: ಕರ್ನಾಟಕದಲ್ಲಿ 2000ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಬೃಹತ್ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜೂಮ್ ಸಂವಾದದ ಮೂಲಕ ಶನಿವಾರ ಚಾಲನೆ ನೀಡಿದರು.

ಶಿವಮೊಗ್ಗ : ಜಿಲ್ಲೆಯಲ್ಲಿ 84 ಕಡೆ ಏಕಕಾಲದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಆರಂಭ ಮಾಡಲಾಯಿತು. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್ಎಸ್ ಸುಂದರೇಶ್ ರವರು ಗೋಪಾಳದ ಸಿ ಬ್ಲಾಕ್ ಪಾರ್ಕ್ ಹತ್ತಿರ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಿವಮೊಗ್ಗ ನಗರದ ಮಾಜಿ ಶಾಸಕರಾದ ಕೆಬಿ ಪ್ರಸನ್ನ ಕುಮಾರ್ ಅವರು ಅಶೋಕನಗರದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ್ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಪಿ ಗಿರೀಶ್ ವಿನೋಬನಗರದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದನ್ನು ಒದಿ : https://cnewstv.in/?p=7115

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*