Cnewstv.in / 11.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಂಘಟನೆಯ ಮೇಲೆಯೇ ನಾವು ಚುನಾವಣೆ ಎದುರಿಸಿದ್ದೇವೆ – ಸಂಸದ ಬಿ.ವೈ. ರಾಘವೇಂದ್ರ.
ಶಿವಮೊಗ್ಗ : ಇಂದು ಬಿಜೆಪಿ ಕಾರ್ಯಾಲಯದಲ್ಲಿ ವಿಧಾನಪರಿಷತ್ ಚುನಾವಣೆ ಕುರಿತ ಸಭೆಯಲ್ಲಿ ಮಾತನಾಡಿದ ಸಂಸದ ಬಿವೈ ರಾಘವೇಂದ್ರ, ವಿವಿಧ ಹಂತದಲ್ಲಿ ಪಕ್ಷದ ಸಂಘಟನೆಯ ಮಾಡಿದ್ದೇವೆ. ಸಂಘಟನೆಯ ಮೇಲೆ ನಾವು ಚುನಾವಣೆ ಎದುರಿಸಿದ್ದೇವೆ. ಪ್ರತಿ ಚುನಾವಣೆಯಲ್ಲೂ ಕೂಡ ಅಭಿವೃದ್ಧಿಪರ ಯೋಜನೆಗಳು ಮತ್ತು ಸಂಘಟನೆ ಆಧಾರಿತವಾಗಿರುತ್ತದೆ. ಇದಕ್ಕೆ ನಮ್ಮ ಹಿರಿಯರ ಸಹಕಾರ ಪ್ರಮುಖ ಕಾರಣವಾಗಿದೆ ಎಂದರು.
ಪಕ್ಷದ ಕಾರ್ಯಕರ್ತರ ಶ್ರಮ ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯಾ ಗೆಲುವಿನ ಅಂತರವನ್ನು ಹೆಚ್ಚಿಸುತ್ತದೆ. ನಮ್ಮ ಪಕ್ಷದ ಕಾರ್ಯಕರ್ತರು ಹಗಲು-ರಾತ್ರಿಯೆನ್ನದೆ ಮತದಾರರನ್ನು ಭೇಟಿ ಮಾಡಿ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ, ಅಯನೂರು ಮಂಜುನಾಥ್, ಅಶೋಕ್ ನಾಯ್ಕ, ರೇಣುಕಾಚಾರ್ಯರು, ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್, ಪರಿಷತ್ ಅಭ್ಯರ್ಥಿ ಡಿ.ಎಸ್, ಅರುಣ್, ಭಾನುಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು
ಇದನ್ನು ಒದಿ : https://cnewstv.in/?p=7122
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv