Breaking News

ಪರಿಷತ್ ಫೈಟ್, ಮತ ಎಣಿಕೆ ಆರಂಭ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್

Cnewstv.in / 14.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಪರಿಷತ್ ಫೈಟ್, ಮತ ಎಣಿಕೆ ಆರಂಭ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಯಿತು.

ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಲೇಜು ಆವರಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಪಕ್ಷದ ಏಜೆಂಟ್ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಬಾಗಿಲು ತೆರೆಯಲಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಯಾವುದೇ ಗೊಂದಲ ಆಗದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಚುನಾವಣಾ ಮತ ಎಣಿಕೆಗೆ 98 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

ಮತ ಎಣಿಕೆ ಹಿನ್ನಲೆಯಲ್ಲಿ ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜನರು ಗುಂಪು ಗುಂಪಾಗಿ ಸೇರುವುದು ನಿಷೇಧಿಸಲಾಗಿದೆ.

ಇದನ್ನು ಒದಿ : https://cnewstv.in/?p=7130

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*