Cnewstv.in / 16.12.2021/ ಕುಲ್ಗಾಂ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕುಲ್ಗಾಂ : ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಸೇನಾಪಡೆ
ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
ರೆದ್ವಾನಿ ಬಾಲಾ ಎಂಬ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ನಿಖರವಾದ ಮಾಹಿತಿಯನ್ನು ಆಧರಿಸಿ, ಯೋಧರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಬುಧವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಉಜ್ರಾಮ್ ಪತ್ರಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನೊಬ್ಬನನ್ನು ಹೊಡೆದುರಳಿಸಲಾಗಿತ್ತು.
ಇದನ್ನು ಒದಿ : https://cnewstv.in/?p=7153
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments