Breaking News

ಬಸವೇಶ್ವರರ ಪ್ರತಿಮೆಗೆ ಮಸಿ- ವೀರಶೈವ ಮಹಾಸಭಾದಿಂದ ಪ್ರತಿಭಟನೆ.

Cnewstv.in / 21.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬಸವೇಶ್ವರರ ಪ್ರತಿಮೆಗೆ ಮಸಿ- ವೀರಶೈವ ಮಹಾಸಭಾದಿಂದ ಪ್ರತಿಭಟನೆ.

ಶಿವಮೊಗ್ಗ : ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ಮಸಿ ಬಳಿದಿರುವು ದನ್ನು ವಿರೋಧಿಸಿ, ಅಖಿಲ ಭಾರತ ವೀರಶೈವ ಮಹಾಸಭಾ ಶಿವಮೊಗ್ಗ ಜಿಲ್ಲಾ ಘಟಕ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಡಿವಿಎಸ್ ಸರ್ಕಲ್ ಬಳಿ ಇರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ನ್ಯೂಸ್ : 

ಭಾವೈಕ್ಯತೆ, ಸಾಮರಸ್ಯ, ಸೌಹಾರ್ಧತೆ ವಿಚಾರಗಳನ್ನು ಪ್ರಚುರಪಡಿಸಿ, ಜಗತ್ತಿಗೆ ಬೆಳಕು ತೋರಿದ ಬಸವೇಶ್ವರರ ಭಾವಚಿತ್ರಕ್ಕೆ ಮಸಿ ಬಳಿಯುವ ದುಷ್ಕೃತ್ಯವೆಸಗಿರುವುದು ದುರದೃಷ್ಟಕರ. ಎಂಇಎಸ್ ಸಂಘಟನೆಯ ಈ ರೀತಿಯ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಕನ್ನಡ ಧ್ವಜ ಸುಡುವುದು. ರಾಯಣ್ಣನ ಪ್ರತಿಮೆ ಧ್ವಂಸದಂತಹ ಕೃತ್ಯ ಮಾಡಿ, ರಾಜ್ಯದಲ್ಲಿ ಶಾಂತಿ ಕದಡುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಎಲ್ಲಾ ದುಷ್ಕರ್ಮಿಗಳನ್ನು ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ರಾಜ್ಯದಲ್ಲಿ ಪುಂಡಾಟಿಕೆ ಮಾಡುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಇದನ್ನು ಒದಿ : https://cnewstv.in/?p=7181

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*