Cnewstv.in / 22.12.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Guidelines : ಕ್ರಿಸ್ಮಸ್ ಹಾಗು ಹೊಸ ವರ್ಷಾಚರಣೆಗೆ ಮಾರ್ಗಸೂಚಿ.
ಬೆಂಗಳೂರು : ಭಾರತದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ದೇಶದಲ್ಲಿ 200 ಮಂದಿಗೂ ಹೆಚ್ಚು ಜನರಲ್ಲಿ ಒಮಿಕ್ರಾನ್ ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿಯ ಉನ್ನತ ಮಟ್ಟದ ಸಭೆ ನಡೆಸಿ, ಮಾರ್ಗಸೂಚಿಯನ್ನು ಪ್ರಕಟಣೆ ಮಾಡಿದೆ. ಇನ್ನು ಈ ಹೊಸ ಮಾರ್ಗಸೂಚಿ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರ ತನಕ ಅನ್ವಯವಾಗಲಿದೆ ಎಂದರು.
ಹೊಸ ಮಾರ್ಗಸೂಚಿ ಅನ್ವಯ :
*ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಬಹಿರಂಗ ಪಾರ್ಟಿಗಳಿಗೆ ಅವಕಾಶವಿಲ್ಲ.
* ಕ್ರೈಸ್ತ ಧರ್ಮದ ಚರ್ಚ್ ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು,ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.
* ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೊವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.
*ಸರ್ಕಾರದ ಮಾರ್ಗಸೂಚಿಯಂತೆ ಕಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚತಕ್ಕದ್ದು.
* ಕ್ಲಬ್, ಪಬ್, ರೆಸ್ಟೋರೆಂಟ್ ವಿಶೇಷ ಇವೆಂಟ್ ಮಾಡಲು ಅವಕಾಶವಿಲ್ಲ. ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮಗಳನ್ನು ವಿಶೇಷ ಪಾರ್ಟಿ, ಇತ್ಯಾದಿ ನಿಷೇಧಿಸಿದೆ. ಆದರೆ ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ.
* ಹೊಸ ವರ್ಷಾಚರಣೆ ಸಂಬಂಧದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ.
*ಪ್ರಾಂಗಣಗಳಲ್ಲಿ, ಉಪಹಾರ ಸ್ಥಳಗಳಲ್ಲಿ ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸತಕ್ಕದ್ದು.
*ಆಯ್ದ ರಸ್ತೆ ಸ್ಥಳಗಳಿಗೆ ಸಂಬಂಧಿಸಿದಂತೆ, ಸ್ಮಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು. ಸರ್ಕಾರದ ಆದೇಶ ಸಂಖ್ಯೆ ಕಂ.ಇ 158 ಟಿ ಎನ್ ಆರ್ 2020 ದಿನಾಂಕ 27-11-2020 ರಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
*65ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ ಧರಿಸುವುದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‌ಗಳು, ಮಾಲ್‌ಗಳು, ಪಂಬ್, ರೆಸ್ಟೋರೆಂಟ್‌ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಮಿನಿಂಗ್ ಹಾಗೂ ಸ್ಮಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸತಕ್ಕದ್ದು.
* ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಇದನ್ನು ಒದಿ : https://cnewstv.in/?p=7186
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments