Cnewstv.in / 22.12.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 6,317 ಒಮಿಕ್ರಾನ್ ಸೋಂಕಿತರ ಸಂಖ್ಯೆ 213 ಕ್ಕೆ ಏರಿಕೆ.
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,317 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 318 ಜನ ಸಾವನ್ನಪ್ಪಿದಾರೆ.
ದೇಶದಲ್ಲಿ ಕೊರೊನಾ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ಕ್ಕೆ ಏರಿಕೆಯಾಗಿದೆ. ಒಂದೇ ದಿನ 13 ಪ್ರಕರಣಗಳು ಹೆಚ್ಚಾಗಿದೆ. ದೆಹಲಿಯಲ್ಲಿ 52 ಮಹಾರಾಷ್ಟ್ರ 54, ಕರ್ನಾಟಕದಲ್ಲಿ 15 ಪ್ರಕರಣಗಳು ಪತ್ತೆಯಾಗಿದೆ. ಈವರೆಗೆ 90 ಮಂದಿ ಒಮಿಕ್ರಾನ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
6.906 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,190 ಇದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,42,01,966 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 138 ಕೋಟಿ, 96 ಲಕ್ಷ ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಭಾರತ ಸೇರಿದಂತೆ ದೇಶಾದ್ಯಂತ ಒಮಿಕ್ರೋನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಎಚ್ಚರವನ್ನು ವಹಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕೋವಿಡ್ -19 ವಾರ್ ರೂಮ್ ಪುನರಾರಂಭ ಗೊಳಿಸಲು ರಾಜ್ಯಗಳಿಗೆ, ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.
ಇದನ್ನು ಒದಿ : https://cnewstv.in/?p=7190
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv