Cnewstv.in / 24.12.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ವಿವಿಧ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ.
ಶಿವಮೊಗ್ಗ : ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ, ಅಸಂಘಟಿತ ತಂಡಗಳು/ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ತಂಡ ಕಲಾವಿದರುಗಳಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಾಮನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲಾಗುತ್ತಿದ್ದು, ಆರ್ಹ ಆಸಕ್ತರಿಂದ ಸೇವಾಸಿಂಧು ಮುಖಾಂತರ ಅರ್ಜಿ ಆಹ್ವಾನಿಸಿದೆ.
ಆಸಕ್ತರು www.kannadasiri.karnataka.gov.in ಮುಖಾಂತರ savasindhu.karnataka.gov.in ರಲ್ಲಿ ದಿ: 08/01/2022 ರೊಳಗಾಗಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9380206704/ 8088304855 ಗಳನ್ನು ಹಾಗೂ ಆಯಾ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನು ಒದಿ : https://cnewstv.in/?p=7225
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments